ಬೆಂಗಳೂರು : ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ.
ಹೌದು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಬ್ಯೂಸಿ ಆದ ಕಾರಣ ಹಲವಡೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಹೋದವರು ಪರದಾಡುವಂತಾಗಿದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗಿ ನಾಲ್ಕು ದಿನವಾಗಿದೆ, ಇಂದೂ ಸಹ ಕೆಲವಡೆ ಸರ್ವರ್ ಡೌನ್ ಆದ ಪರಿಣಾಮ ಅರ್ಜಿ ಸಲ್ಲಿಸಲು ಪರದಾಡುವಂತಾಗಿದೆ.
ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸರ್ವರ್ ಸಮಸ್ಯೆಯ ನಡುವೆಯೂ ರಾಜ್ಯಾದ್ಯಂತ ಕಳೆದ ಮೂರು ದಿನಗಳಲ್ಲಿ ಒಟ್ಟು 8,16,631 ಗ್ರಾಹಕರು ಯೋಜನೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಒಟ್ಟು 8,16,631 ಮುಟ್ಟಿದ್ದು, ಕಳೆದ ಎರಡು ದಿನಗಳಿಗೆ ಹೋಲಿಸಿದರೆ, ನೋಂದಣಿ ಸಂಖ್ಯೆ ಮೂರು ಪಟ್ಟು ಹೆಚ್ಚಳಗೊಂಡಿದೆ. 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಪಡೆಯುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಪಡೆಯಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…