ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ : ಕೇಂದ್ರ ಸರ್ಕಾರ ಅಧಿಕೃತ ಘೋಷಣೆ..Vishwnaews24

Featured, ರಾಷ್ಟ್ರ ನ್ಯೂಸ್

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ  ಸಬ್ಸಿಡಿ..

ನವದೆಹಲಿ:  ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.

ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.

ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ  ನೇಮಕ  – Vishwnaews24

Leave a Reply