ನವದೆಹಲಿ: ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.
ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.
ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…