ಬೆಂಗಳೂರು : ಗೃಹ ಬಳಕೆಯ LPG ಸಂಪರ್ಕ ಹೊಂದಿರುವ ಪ್ರತಿಯೊಬ್ಬ ಗ್ರಾಹಕರೂ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳುವಂತೆ ತೈಲ ಕಂಪನಿಗಳು ಹಾಗೂ ಗ್ಯಾಸ್ ವಿತರಕರು ತಿಳಿಸಿದ್ದಾರೆ. ಆಗಸ್ಟ್ 16ರ ಒಳಗೆ ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ.
ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ಅಪ್‌ಡೇಟ್ ಮಾಡುವುದು ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ E-KYC ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಾಗಲೇ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಡೆಡ್‌ಲೈನ್ ನೀಡಿದ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಇದೀಗ ಆಗಸ್ಟ್ 16ರವರೆಗೆ ಗಡುವನ್ನು ವಿಸ್ತರಿಸಿದೆ.
ಆಗಸ್ಟ್ 16ರ ಬಳಿಕವೂ E-KYC ಮಾಡಿಸದಿದ್ದರೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ನಿರ್ಬಂಧಿಸುವ ಅಥವಾ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಗ್ಯಾಸ್ ವಿತರಕರು ತಿಳಿಸಿದ್ದಾರೆ.
ಸದ್ಯ ಸಬ್ಸಿಡಿ ದರದಲ್ಲಿ ದೊರೆಯುತ್ತಿರುವ ಗೃಹ ಬಳಕೆಯ ಸಿಲಿಂಡರ್‌ನ ಬೆಲೆ ಸುಮಾರು 945 ರೂ. ಇದೆ. ಆದರೆ E-KYC ಮಾಡಿಸದ ಗ್ರಾಹಕರು ಸಬ್ಸಿಡಿ ಸೌಲಭ್ಯ ಕಳೆದುಕೊಂಡರೆ, ಅದೇ ಸಿಲಿಂಡರ್‌ಗೆ ಮಾರುಕಟ್ಟೆ ದರದಂತೆ ಸುಮಾರು 2,108 ರೂ. ಪಾವತಿಸಬೇಕಾಗಬಹುದು ಎಂದು ವಿತರಕರು ತಿಳಿಸಿದ್ದಾರೆ.
ಹೀಗಾಗಿ ಗ್ರಾಹಕರು ಆಗಸ್ಟ್ 16ರೊಳಗೆ ತಮ್ಮ ಸಮೀಪದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ E-KYC ಮಾಡಿಸಿಕೊಳ್ಳಬಹುದು. ಇಲ್ಲವೇ ಲಭ್ಯವಿರುವ ಅಧಿಕೃತ ಆನ್‌ಲೈನ್ ಅಥವಾ ಮೊಬೈಲ್ ಸೇವೆಯ ಮೂಲಕವೂ E-KYC ಪೂರ್ಣಗೊಳಿಸಿಕೊಳ್ಳಬಹುದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…