ಗೃಹ ಲಕ್ಷ್ಮಿ ಯೋಜನೆ – ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭ : ಲಕ್ಷ್ಮೀ ಹೆಬ್ಬಾಳ್ಕರ್ – Vishwanews24

Featured, ರಾಜ್ಯ ನ್ಯೂಸ್

ಗೃಹ ಲಕ್ಷ್ಮಿ ಯೋಜನೆ – ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭ : ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 16 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

Leave a Reply