Featured

ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ – Vishwanews24

ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ  ಕೊನೆಗೂ ಮುಹೂರ್ತ ಪಿಕ್ಸ್ ಆಗಿದೆ. ಜುಲೈ.19ರಿಂದ ನೋಂದಣಿ ಆರಂಭಗೊಳ್ಳಲಿದೆ. ಹಾಗಾದ್ರೇ ಈ ಯೋಜನೆಗೆ ನೋಂದಣಿ ಹೇಗೆ? ಬೇಕಾಗುವ ದಾಖಲೆಗಳು ಏನು ..?

ಈ ಪ್ರಮುಖ ಹಾಗೂ ನಾಡಿನ ಮಹಿಳಾ ಸಮುದಾಯ ಕುತೂಹಲದಿದಂ ನಿರೀಕ್ಷಿಸುತ್ತಿದ್ದಂತ ಯೋಜನಗೆ ಜುಲೈ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದಾರೆ.

ಸಿಎಂ ಚಾಲನೆಯ ಬಳಿಕ ಅಂದಾಜು 1.28 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ರೂ ಹಣ ಜಮಾ ಮಾಡುವಂತ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಆಗಸ್ಟ್ 15ರ ನಂತ್ರ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ರೂ.2000 ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.

ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಹೇಗೆ.?

ಗೃಹ ಜ್ಯೋತಿಯಂತೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಗೃಹ ಲಕ್ಷ್ಮಿ ಯೋಜನೆಯಲ್ಲಿ ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ಅಧವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು. ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ನೋಂದಣಿ ಮಾಡಬಹುದಾಗಿದೆ.

ಇದಲ್ಲದೇ ಫಲಾನುಭವಿಗಳ ಹೆಸರು ನೋಂದಣಿಗೆ ಪ್ರಜಾ ಪ್ರತಿನಿಧಿ ಹೆಸರಿನಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗುತ್ತಿದೆ. ಅವರು ಗೃಹ ಲಕ್ಷ್ಮಿಯರಿಗೆ ನೋಂದಣಿ ಮಾಡಿಕೊಳ್ಳಲು ನೆರವಾಗಲಿದ್ದಾರೆ.

ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಸಿದಾಗ ಅಲ್ಲಿಯೇ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿದರೇ ಮಂಜೂರಾತಿ ಪತ್ರವನ್ನು ನಂತ್ರ ಮನೆಗೆ ತಲುಪಲಿದೆ.

ಅಂದಹಾಗೇ ಗೃಹ ಲಕ್ಷ್ಮೀ ಯೋಜನೆಗಾಗಿ ಯಜಮಾನಿ ಮಹಿಳೆಯರು ನೋಂದಣಿ ಮಾಡಲು ಸಂಪೂರ್ಣ ಉಚಿತವಾಗಿದೆ. ಯಾವುದೇ ಶುಲ್ಕವಿಲ್ಲ. ಅಲ್ಲವೇ ನೋಂದಣಿಗೆ ಯಾವುದೇ ಗಡುವು ಕೂಡ ಇಲ್ಲ.

ಪಡಿತರ ಚೀಟಿಗಳ ಲಭ್ಯ ಡೇಟಾ ಆಧರಿಸಿ ನೋಂದಣಿಗೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಆ ಕುರಿತು ಮಾಹಿತಿ ಕೂಡ ಎಸ್ ಎಂಎಸ್ ಮೂಲಕ ಬರಲಿದೆ.

ಗೃಹ ಲಕ್ಷ್ಮಿ ಯೋಜನೆಗೆ ಅಗತ್ಯ ದಾಖಲೆಗಳು ಏನು.?

ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕಿದೆ.

ಆಧಾರ್ ನಂಬರ್ ಜೋಡನೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಬೇರೊಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ, ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.

ಫಲಾನುಭವಿ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕಾಗಿದೆ. ಬ್ಯಾಂಕ್ ಖಾತೆ ಇಲ್ಲದಿದ್ದಲೇ ಖಾತೆ ತೆರೆದ ಬಳಿಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago