ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ.
5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.
ಹಣ ಜಮೆಯಾಗಿಲ್ಲ ಏಕೆ?
3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.
ಇನ್ನು ಸೆಪ್ಟೆಂಬರ್ನಲ್ಲಿ 1 ಕೋಟಿ 14ಲಕ್ಷ ಜನ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್ನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 2,280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…