ಮಂಗಳೂರು:ಗೃಹ ಸಚಿವ ಅಮಿತ್ ಶಾ ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕುಎಂದು ಐವನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿಗೆ ಅಮಿತ್ ಶಾ ಬರುವುದರ ವಿರುದ್ಧ ಗೋ ಬ್ಯಾಕ್ ಎಂಬ ಕಾರಣಕ್ಕೋ ಅಥವಾ ಅವರಿಗೆ ಸಮಯ ಹೊಂದಿಕೆ ಆಗಿಲ್ಲ ಎಂಬ ಕಾರಣಕ್ಕೋ ಅವರ ಮಂಗಳೂರು ಪ್ರವಾಸ ಸದ್ಯ ರದ್ದಾಗಿದೆ. ಇದೀಗ ರಾಜ್ಯಕ್ಕೆ 18ರಂದು ಭೇಟಿ ನೀಡಲಿರುವ ಅವರು ತಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ರಾಜ್ಯಗಳಲ್ಲಿ ಎನ್‌ಆರ್‌ಸಿ ಅನುಷ್ಠಾನಗೊಳಿಸಲು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದರೆ, ಅಮಿತ್ ಶಾ ಅನುಷ್ಠಾನಗೊಳಿಸುವುದರಲ್ಲಿ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಅಥವಾ ಪ್ರಧಾನಮಂತ್ರಿ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದರು.
ಕಪಾಳಬೆಟ್ಟದಲ್ಲಿ ಯೇಸು ಕ್ರಿಸ್ತರ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸಿ ಕನಕಪುರದಲ್ಲಿ ಮಾನತಾಡಿರುವ ಕಲ್ಲಡ್ಕ ಪ್ರಭಾಕರ ಭಟ್, ಸಮುದಾಯಕ್ಕೆ ನೋವಾಗುವಂತೆ ನಡೆದುಕೊಂಡಿದ್ದಾರೆ ಎಂದರು.
ಕಪಾಳಬೆಟ್ಟದಲ್ಲಿ ಯೇಸು ಕ್ರಿಸ್ತರ ಪ್ರತಿಮೆ ಸ್ಥಾಪನೆ ಅಕ್ರಮ ಎಂದಾದರೆ ಆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪರ ಮನೆಯ ಎದುರಲ್ಲೋ ಅಥವಾ ವಿಧಾನಸಭೆಯ ಎದುರೋ ಪ್ರತಿಭಟಿಸಬಹುದಿತ್ತು. ಆದರೆ ಈ ರೀತಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಿ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕಾರ್ಯ ಸಂವಿಧಾನ ವಿರೋಧಿ ಎಂದು ಅವರು ಹೇಳಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…