ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು , 500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ.. Vishwanews24

ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು ..

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ..

ಪುತ್ತೂರು : ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರದಲ್ಲಿ ಫೆ.24ರಿಂದ ಮಾ.2ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮ ನಡೆಯಲಿದೆ.

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಚಾರಿತ್ರಿಕಗೊಳಿಸಲು 22 ಉಪ ಸಮಿತಿಗಳ ಮೂಲಕ ಸಿದ್ಧತೆ ಮಾಡಲಾಗುತ್ತಿದೆ. ಜಗತ್ತಿನೆಲ್ಲೆಡೆ ಇರುವ ಕ್ಷೇತ್ರದ ಭಕ್ತರನ್ನು ಸಂಪರ್ಕಿಸುವ ಕಾರ್ಯ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕ್ಷೇತ್ರಾಡಳಿತ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ತಿಳಿಸಿದೆ.

ಗೆಜ್ಜೆಗಿರಿಯಲ್ಲಿ ಎಲ್ಲ ಸಾನ್ನಿಧ್ಯಗಳ ನಿರ್ಮಾಣ ಪೂರ್ಣಗೊಂಡಿದೆ. ಗುರು ಸಾಯನ ಬೈದ್ಯರು, ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ- ಚೆನ್ನಯರು ಬಾಳಿ ಬದುಕಿದ್ದ ಪ್ರಾಚೀನ ಮನೆಯನ್ನೇ ಸತ್ಯಧರ್ಮ ಚಾವಡಿ ಹೆಸರಿನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲಾಗಿದೆ. ಶಿಖರಾಗ್ರದಲ್ಲಿ ಕೋಟಿ – ಚೆನ್ನಯ ಮೂಲಸ್ಥಾನ ಗರಡಿ ಮತ್ತು ಬೆರ್ಮೆರ್‌ ಗುಂಡ ತಲೆ ಎತ್ತಿದ್ದು, ತಪ್ಪಲಲ್ಲಿ ಸತ್ಯಧರ್ಮ ಚಾವಡಿ, ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಕಲ್ಲಾಲ್ದಾಯ ಮತ್ತು ಕೊರತಿ ಸಾನ್ನಿಧ್ಯ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಹಾಗೂ ಮಾತೆ ದೇಯಿ ಬೈದ್ಯೆತಿ ಸಮಾಧಿ ಪುನರುತ್ಥಾನ ಪೂರ್ಣಗೊಂಡಿದೆ.

ಫೆ. 24ರಂದು ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಾನಗಳು ಆರಂಭಗೊಳ್ಳಲಿದ್ದು, 28ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ. ಫೆ. 29ರಿಂದ ಮಾ. 2ರ ವರೆಗೆ ಮೂಲಸ್ಥಾನ ಗರಡಿ ನೇಮ ನಡೆಯಲಿದೆ. ಹೊರೆಕಾಣಿಕೆ ಮೆರವಣಿಗೆ ಫೆ. 25ರಂದು ಮಧ್ಯಾಹ್ನ 12ಕ್ಕೆ ಪುತ್ತೂರು ದೇವಸ್ಥಾನದ ಗದ್ದೆಯಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. 6 ದಿನಗಳಲ್ಲಿ ಸಾಂಸ್ಕೃತಿಕ ವೈವಿಧ್ಯ, 5 ದಿನ ಧಾರ್ಮಿಕ ಸಭೆ ನಡೆಯಲಿದೆ.

 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago