ಉಡುಪಿ

ಕಾಪು : ಗೆಲುವಿನ ಸ್ಪಷ್ಟ ಗುರಿಯೊಂದಿಗೆ ಗ್ರಾ.ಪಂ. ಚುನಾವಣೆ ಎದುರಿಸಿ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ಕಾಪು : ಗೆಲುವಿನ ಸ್ಪಷ್ಟ ಗುರಿಯೊಂದಿಗೆ ಗ್ರಾ.ಪಂ. ಚುನಾವಣೆ ಎದುರಿಸಿ: ಕುಯಿಲಾಡಿ ಸುರೇಶ್ ನಾಯಕ್ -Vishwanews24

ಕಾಪು : ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿ ದೇಶದೆಲ್ಲೆಡೆ ವಿವಿಧ ಸ್ತರಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಈ ಬಾರಿಯ ಎಲ್ಲಾ ಚುನಾವಣೆಗಳಲ್ಲಿ ನಿಶ್ಚಿತ ಗೆಲುವಿನ ವಾತಾವರಣವಿದೆ.ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂಕಾರ್ಯಕರ್ತರು ಗೆಲುವಿನ ಸ್ಪಷ್ಟ ಗುರಿಯೊಂದಿಗೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‍ ಹೇಳಿದರು.

ಅವರು ಸೆ.12ರಂದು ಕಾಪು ಕಾಳಿಕಾಂಬ ಸಭಾ ಭವನದಲ್ಲಿ ನಡೆದ ಬಿಜೆಪಿ ಕಾಪು ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ.ಕಾರ್ಯಕರ್ತರೇ ಪಕ್ಷದಜೀವಾಳ.ಪಕ್ಷದತತ್ವಸಿದ್ಧಾಂತಗಳನ್ನು ಪಾಲಿಸುವುದುಎಲ್ಲರ ಆದ್ಯ ಕರ್ತವ್ಯ.ಪಕ್ಷದಲ್ಲಿ ಯಾವುದೇ ಅಶಿಸ್ತನ್ನುಸಹಿಸಲಾಗುವುದಿಲ್ಲ.ಕಾರ್ಯಕರ್ತರಿಗೆ ಗ್ರಾಮ ಪಂಚಾಯತ್ ಚುನಾವಣೆ ಒಂದು ಪರೀಕ್ಷೆ ಇದ್ದಂತೆ.ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕಾಪು ಕ್ಷೇತ್ರ ವ್ಯಾಪ್ತಿಯ ಎಲ್ಲಾ 26 ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಬೆಂಬಲಿತ  ಅಂತರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯುವಂತೆಎಲ್ಲರೂ ಶ್ರಮವಹಿಸಬೇಕು ಎಂದರು.

ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಉಪಾಧ್ಯಕ್ಷೆಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಕ್ಷೇತ್ರಪ್ರಭಾರಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ, ನಿಕಟಪೂರ್ವ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ,ಜಿ.ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ,ಕ್ಷೇತ್ರಾಧ್ಯಕ್ಷೆ ಸುಮಾ ಶೆಟ್ಟಿ, ಜಿಲ್ಲಾ ಹಿಂ.ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಕ್ಷೇತ್ರಾಧ್ಯಕ್ಷ ನಾಗೇಂದ್ರ ಎಮ್.ಜಿ., ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಕ್ಷೇತ್ರಾಧ್ಯಕ್ಷ ಗುರುನಂದನ್, ಪಂಚಾಯತ್‍ರಾಜ್ ಗ್ರಾಮೀಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಜೀವ್ ಕುಲಾಲ್, ಕ್ಷೇತ್ರ ಸಂಚಾಲಕ ಯೋಗೀಶ್ ಸುವರ್ಣ, ಸಹಕಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮುರಳೀಧರ ಪೈ ಹಾಗೂ ಪಕ್ಷದ ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರುಉಪಸ್ಥಿತರಿದ್ದರು.

ಕಾಪು ಕ್ಷೇತ್ರ ಉಪಾಧ್ಯಕ್ಷ ನವೀನ್ ಎಸ್.ಕೆ. ಸ್ವಾಗತಿಸಿದರು. ಕಾಪು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿ, ಅನಿಲ್ ಶೆಟ್ಟಿ ವಂದಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago