ಕಾಪು : ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿ ದೇಶದೆಲ್ಲೆಡೆ ವಿವಿಧ ಸ್ತರಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಈ ಬಾರಿಯ ಎಲ್ಲಾ ಚುನಾವಣೆಗಳಲ್ಲಿ ನಿಶ್ಚಿತ ಗೆಲುವಿನ ವಾತಾವರಣವಿದೆ.ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂಕಾರ್ಯಕರ್ತರು ಗೆಲುವಿನ ಸ್ಪಷ್ಟ ಗುರಿಯೊಂದಿಗೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಸೆ.12ರಂದು ಕಾಪು ಕಾಳಿಕಾಂಬ ಸಭಾ ಭವನದಲ್ಲಿ ನಡೆದ ಬಿಜೆಪಿ ಕಾಪು ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ.ಕಾರ್ಯಕರ್ತರೇ ಪಕ್ಷದಜೀವಾಳ.ಪಕ್ಷದತತ್ವಸಿದ್ಧಾಂತಗಳನ್ನು ಪಾಲಿಸುವುದುಎಲ್ಲರ ಆದ್ಯ ಕರ್ತವ್ಯ.ಪಕ್ಷದಲ್ಲಿ ಯಾವುದೇ ಅಶಿಸ್ತನ್ನುಸಹಿಸಲಾಗುವುದಿಲ್ಲ.ಕಾರ್ಯಕರ್ತರಿಗೆ ಗ್ರಾಮ ಪಂಚಾಯತ್ ಚುನಾವಣೆ ಒಂದು ಪರೀಕ್ಷೆ ಇದ್ದಂತೆ.ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕಾಪು ಕ್ಷೇತ್ರ ವ್ಯಾಪ್ತಿಯ ಎಲ್ಲಾ 26 ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಬೆಂಬಲಿತ ಅಂತರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯುವಂತೆಎಲ್ಲರೂ ಶ್ರಮವಹಿಸಬೇಕು ಎಂದರು.
ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಉಪಾಧ್ಯಕ್ಷೆಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಕ್ಷೇತ್ರಪ್ರಭಾರಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ, ನಿಕಟಪೂರ್ವ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ,ಜಿ.ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ,ಕ್ಷೇತ್ರಾಧ್ಯಕ್ಷೆ ಸುಮಾ ಶೆಟ್ಟಿ, ಜಿಲ್ಲಾ ಹಿಂ.ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಕ್ಷೇತ್ರಾಧ್ಯಕ್ಷ ನಾಗೇಂದ್ರ ಎಮ್.ಜಿ., ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಕ್ಷೇತ್ರಾಧ್ಯಕ್ಷ ಗುರುನಂದನ್, ಪಂಚಾಯತ್‍ರಾಜ್ ಗ್ರಾಮೀಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಾಜೀವ್ ಕುಲಾಲ್, ಕ್ಷೇತ್ರ ಸಂಚಾಲಕ ಯೋಗೀಶ್ ಸುವರ್ಣ, ಸಹಕಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮುರಳೀಧರ ಪೈ ಹಾಗೂ ಪಕ್ಷದ ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರುಉಪಸ್ಥಿತರಿದ್ದರು.
ಕಾಪು ಕ್ಷೇತ್ರ ಉಪಾಧ್ಯಕ್ಷ ನವೀನ್ ಎಸ್.ಕೆ. ಸ್ವಾಗತಿಸಿದರು. ಕಾಪು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿ, ಅನಿಲ್ ಶೆಟ್ಟಿ ವಂದಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…