Featured

ಗೊಂಬೆಯ ಕೈ ಹಿಡಿದ ಚಂದನ್ , ಯುವ ದಸರಾ ಕಾರ್ಯಕ್ರಮದಲ್ಲಿ ಉಂಗುರ ತೊಡಿಸುವ ಮೂಲಕ ಪ್ರಪೋಸ್ -Vishwanews24

ಮೈಸೂರು:ಕನ್ನಡ Rapper, ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಮೈಸೂರಿನಲ್ಲಿ ನಡೆದಿದೆ. ನಿನ್ನೆ  ಅಭಿಮಾನಿಗಳ ಮುಂದೆ ಚಂದನ್ ಹಾಗೂ ನಿವೇದಿತಾ ಎಂಗೇಜ್ ಆಗಿದ್ದಾರೆ.

ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದರು.

‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಪ್ರತಿ ಸೀಸನ್ ನಲ್ಲಿಯೂ ಸಾಕಷ್ಟು ಜೋಡಿಗಳು ಹುಟ್ಟುಕೊಳ್ಳುತ್ತಾರೆ. ಕಾರ್ಯಕ್ರಮದಲ್ಲಿ ಪ್ರೇಮಪಕ್ಷಿಗಳ ಹಾಗೆ ಜೊತೆ ಜೊತೆಗೆ ಒಡಾಡುವ, ಜೋಡಿಗಳು ಕಾರ್ಯಕ್ರಮ ಮುಗಿದ ಮೇಲೆ ಮರೆಯಾಗುತ್ತಾರೆ. ಆದರೆ, ಚಂದನ್ ಮತ್ತು ನಿವೇದಿತಾ ಈಗ ನಿಜ ಜೀವನದಲ್ಲಿ ಒಂದಾಗಿದ್ದು, ಹೊಸ ಬದುಕಿನ ಕಾಲಿಟ್ಟಿದ್ದಾರೆ.

ತಮ್ಮ ಪ್ರಿಯತಮೆ ನಿವೇದಿತಾಗೆ ಚಂದನ್ ಶೆಟ್ಟಿ ದೊಡ್ಡ ಸರ್ ಪ್ರೈಸ್ ನೀಡಿದ್ದಾರೆ. ಅಭಿಮಾನಿಗಳ ಮುಂದೆ ಆಕೆಯ ಕೈಗೆ ಉಂಗುರ ಹಾಕಿದ್ದಾರೆ.

ನಿನ್ನೆ (ಅಕ್ಟೋಬರ್ 4) ಯುವ ದಸರಾದಲ್ಲಿ ಚಂದನ್ ಶೆಟ್ಟಿ ಸಂಗೀತ ಕಾರ್ಯಕ್ರಮ ನೀಡಿದರು. ಇದೇ ಕಾರ್ಯಕ್ರಮದಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದಾರೆ. ಆಕೆಯ ಕೈಗೆ ಉಂಗುರ ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೇದಿಕೆ ಮೇಲೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವುದರ ಮೂಲಕ ನಿವೇದಿತಾಗೆ ಸರ್ ಪ್ರೈಸ್ ನೀಡಿದ್ದಾರೆ.

ವೇದಿಕೆ ಮೇಲೆ ನಿವೇದಿತಾಗೆ ರಿಂಗ್ ಹಾಕಿದ ಚಂದನ್ ನಂತರ ತಮ್ಮ ಅಭಿಮಾನಿಗಳ ಜೊತೆಗೆ ಮಾತನಾಡಿದರು. ”ಈ ದಿನ ನಾನು ಪ್ರಪೋಸ್ ಮಾಡುತ್ತಾನೆ ಎಂದು ತಿಳಿದಿರಲಿಲ್ಲ. ಆದರೆ, ನಿಮ್ಮೆಲ್ಲರ ಮುಂದೆ ನಿವೇದಿತಾಗೆ ಪ್ರಪೋಸ್ ಮಾಡಿದ್ದೇನೆ. ಸದ್ಯದಲ್ಲಿಯೇ ನಾವು ಮದುವೆ ಆಗುತ್ತಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ.” ಎಂದು ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago