Featured

ಗೋಗಳ್ಳತನದ ಮುಂದುವರೆದರೆ ತೀವ್ರವಾದ ಹೋರಾಟಗಳು ಮತ್ತೆ ಮರುಕಳಿಸಬಹುದು : ಯಶಪಾಲ್ ಸುವರ್ಣ -Vishwanews24

ಉಡುಪಿ, : ಪ್ರತೀ ವರ್ಷದಂತೆ ಈ ವರ್ಷವೂ ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ಗೋಗಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣವಾಗಿದೆ.

ಸರಕಾರದ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದರೆ ಜಿಲ್ಲೆಯಲ್ಲಿ 2005ರ ತೀವ್ರತರವಾದ ಹೋರಾಟಗಳು ಮತ್ತೆ ಮರುಕಳಿಸಬಹುದು ಎಂದು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಎಚ್ಚರಿಸಿದ್ದಾರೆ.

 

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಐಷಾರಾಮಿ ಹೊಟೇಲಿನಲ್ಲಿ ಮಲಗಿ ಬೆಳಗ್ಗೆ ಗ್ರಾಮಗಳಿಗೆ ಹೋಗಿ ಮನವಿ ಸ್ವೀಕರಿಸಿ ಪ್ರಚಾರಗಿಟ್ಟಿಸಿಕೊಳ್ಳುವ ಬದಲು ನಿಜವಾದ ಜನಪರ ಕಾಳಜಿ ಇದ್ದರೆ ಕರಾವಳಿಗೆ ಬಂದು ಇಲ್ಲಿನ ಹೈನುಗಾರರ ಸಮಸ್ಯೆಗಳನ್ನು ಆಲಿಸಲಿ. ಇಲ್ಲಿ ಹಸು ಸಾಕಿಕೊಂಡಿರುವವರು ರಾತ್ರಿ ಹೊತ್ತು ಭಯದಲ್ಲೇ ಬದುಕುವಂತಾಗಿದೆ. ಮಾರಕಾಸ್ತ್ರಗಳೊಂದಿಗೆ ಗೋವುಗಳನ್ನು ದರೋಡೆ ಮಾಡುತ್ತಿರುವ ದುಷ್ಕರ್ಮಿಗಳಿಗೆ ರಾಜಕೀಯ ಪಕ್ಷಗಳ ಬಹಿರಂಗ ಬೆಂಬಲವಿದ್ದು, ಅವರ ಪರವಾಗಿ ರಾಜಾರೋಷವಾಗಿ ಲಾಬಿ ನಡೆಸುವಷ್ಟು ನೀಚತನಕ್ಕೆ ಇಲ್ಲಿನ ರಾಜಕಾರಣಿಗಳು ಇಳಿದಿದ್ದಾರೆ.

ದನಗಳ್ಳರು ಒಂದು ವರ್ಗಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕಾಗಿ ಇಡೀ ವ್ಯವಸ್ಥೆ ಇಂದು ದನಗಳ್ಳರ ಪರವಾಗಿ ನಿಂತಂತೆ ಕಾಣುತ್ತಿದೆ. ಹಿಂದೂ ಸಮಾಜವನ್ನು ಈಗ ಕಾಡುತ್ತಿರುವ ಹತಾಶೆ ಮುಂದಿನ ದಿನದಲ್ಲಿ ಉಗ್ರ ಹೋರಾಟದ ರೂಪ ಪಡೆದುಕೊಂಡರೆ ಅದು ಸಾಮಾಜಿಕ ಅಶಾಂತಿಗೆ ಕಾರಣವಾಗಬಹುದು. ಪೊಲೀಸ್ ಇಲಾಖೆಗೆ ಶಾಂತಿ ಸುವ್ಯವಸ್ಥೆಯ ಕಾಳಜಿ ಇದ್ದರೆ ಕೂಡಲೆ ಅಕ್ರಮ ಕಸಾಯಿ ಖಾನೆಗಳನ್ನು ಪತ್ತೆ ಹಚ್ಚಿ ಮುಚ್ಚಬೇಕು.ಗೋಸಾಗಾಟದಲ್ಲಿ ಸಕ್ರಿಯರಾಗಿರುವ ದರೋಡೆಕೋರರನ್ನು ಬಂಧಿಸಿ ಗಡಿಪಾರು ಮಾಡಬೇಕು. ಗೋರಕ್ಷಣೆಯ ಸಂದರ್ಭದಲ್ಲಿ ಸುಳ್ಳು ಕೇಸುಗಳಿಗೆ ಗುರಿಯಾದ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈ ಬಿಟ್ಟು ಆ ಯುವಕರ ಸಮಾಜಪರ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ರಾಜ್ಯ ಸರಕಾರ ಪೊಲೀಸ್ ಇಲಾಖೆಯ ಕಾರ್ಯದಲ್ಲಿ ಹಸ್ತಕ್ಷೇಪ ಮಾಡದೆ ಅವರಿಗೆ ಸ್ವತಂತ್ರವಾಗಿ ಕಾರ್ಯಾಚರಿಸಲು ಬಿಡಬೇಕು.

ಯಡಿಯೂರಪ್ಪ ಅವರ ಸರಕಾರವಿದ್ದ ಸಮಯದಲ್ಲಿ ಮಂಡಿಸಿದ್ದ ಗೋಹತ್ಯಾ ನಿಷೇದ ವಿಧೇಯಕವನ್ನು ಜಾರಿಗೊಳಿಸಬೇಕು. ಗೋಹತ್ಯೆಯನ್ನು ತಡೆಯಲು ಹೋದ ಹಲವಾರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಕಾರ್ಯಕರ್ತರು ಮೈ ಮೇಲೆ ಕೇಸುಗಳನ್ನು ಹಾಕಿಕೊಂಡು ನ್ಯಾಯಾಲಯಕ್ಕೆ ಅಲೆಯುತ್ತಿದ್ದಾರೆ. ಇಷ್ಟೆಲ್ಲಾ ಹೋರಾಟದ ಬಳಿಕವೂ ಗೋಹತ್ಯೆಯ ಪ್ರಮಾಣ ಕಡಿಮೆಯಾಗಿಲ್ಲ.ಸೂಕ್ತ ಕಾನೂನು ಇಲ್ಲದ ಕಾರಣ ದುಷ್ಕರ್ಮಿಗಳು ಗೋ ಕಳ್ಳತನದ ಬಗ್ಗೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತಗಳು ಗಂಭೀರ ಕ್ರಮ ಕೈಗೊಳ್ಳದೇ ಹೋದರೆ 2003ರಿಂದ 2005ರವರೆಗೆ ಕರಾವಳಿಯಲ್ಲಿ ಕಾಣಿಸಿಕೊಂಡಿದ್ದ ಪ್ರಕ್ಷುಬ್ಧ ವಾತಾವರಣ ಮತ್ತೆ ತಲೆ ಎತ್ತಬಹುದು ಇದಕ್ಕೆ ಇಲಾಖೆ ಅವಕಾಶ ಮಾಡಿಕೊಡಬಾರದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago