ಮುನಿಯಾಲು: ಯುವಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ಮುನಿಯಾಲಿನಲ್ಲಿ
ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋಧ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾನ್ ಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹೇಳಿದರು.
ಇದನ್ನೂ ಓದಿ:
ಅವರು ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆ.19 ರಿಂದ 21 ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು. ರೈತರು, ಕೃಷಿ ಮತ್ತು ಯುವಸಮುದಾಯ ವನ್ನು ಕೃಷಿಯತ್ತ ಮರಳಿ ತಂದು ಬದುಕು ಕಟ್ಟಲು ಪ್ರೇರಣೆ ನೀಡುವ ಮಹಾಸಂಕಲ್ಪದಿಂದ ನಡೆಯುವ ಪಾರಂಪರಿಕ ಶ್ರೀಮನ್ನಾಗ ಮಂಡಲವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಎಂದು ಉದಯ ಕುಮಾರ್ ಶೆಟ್ಟಿ ಹೇಳಿದರು.
ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್, ಸವಿತಾ ರಾಮಕೃಷ್ಣ ಆಚಾರ್, ನಮಿತಾ ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್, ಪಡುಕುಡೂರು ಪ್ರಸನ್ನ ಶೆಟ್ಟಿ, ಭಾರವಿ ಶೆಟ್ಟಿ, ಕಡ್ತಲ ಸುನೀಲ್ ಹೆಗ್ಡೆ, ಕುಕ್ಕುಜೆ ಸಂಪತ್ ಪೂಜಾರಿ, ಎಳ್ಳಾರೆ ನಾರಾಯಣ ಆಚಾರ್ ಸಹಿತ ವಿವಿಧ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…