ಗೋಪಾಲಕೃಷ್ಣ ನಾಗಿ ದರ್ಶನ ನೀಡಿದ ಉಡುಪಿಯ ಶ್ರೀಕೃಷ್ಣ -Vishwanews24

ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, ವಿಶೇಷ ಅಲಂಕಾರ ಮಾಡಲಾಗಿದೆ. ಗೋಪಾಲಕೃಷ್ಣ ನಾಗಿ ಕಡೆಗೋಲು ಕೃಷ್ಣ ದರ್ಶನ ಕೊಟ್ಟಿದ್ದಾನೆ.

ಚಾಂದ್ರಮಾನ ಪದ್ಧತಿಯಲ್ಲಿ ಹಬ್ಬಗಳನ್ನು ಆಚರಿಸುವ ಸಮುದಾಯಗಳು ಉಡುಪಿಯಲ್ಲಿದೆ. ಅವರೆಲ್ಲಾ ಅಷ್ಟಮಿ ಆಚರಣೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣಮಠದ ಕಡೆಗೋಲು ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಗೋಪಾಲಕೃಷ್ಣನಾಗಿ ಕಡೆಗೋಲ ಕೃಷ್ಣ ಅವತಾರ ಎತ್ತಿದ್ದ. ಪರ್ಯಾಯ ಪೀಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶ್ರೀಕೃಷ್ಣನಿಗೆ ವಿಶೇಷವಾದ ಅಲಂಕಾರವನ್ನು ನೆರವೇರಿಸಿದರು. ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

 

ಕಾಡಿನಲ್ಲಿ ಗೋವನ್ನು ಮೇಯಿಸುವ ಶ್ರೀಕೃಷ್ಣನಾಗಿ ಉಡುಪಿ ಕಡೆಗೋಲು ಕೃಷ್ಣ ಇಂದು ಭಕ್ತರಿಗೆ ದರ್ಶನ ಕೊಡುತ್ತಿದ್ದಾನೆ. ಶ್ರೀಕೃಷ್ಣ, ಮುಖ್ಯಪ್ರಾಣ ದೇವರುಗಳು, ಗರುಡ ದೇವರಿಗೆ ಅಲಂಕಾರಗಳನ್ನು ಮಾಡಿ ಅದಮಾರು ಮಠ ಫೋಟೋಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 11ರಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ. ಕೊರೊನಾ ಲಾಕ್‍ಡೌನ್ ನಂತರ ಉಡುಪಿ ಕೃಷ್ಣಮಠ ಭಕ್ತರಿಗೆ ತೆರೆದುಕೊಂಡಿಲ್ಲ. ಮುಂದಿನ ಪರಿಸ್ಥಿತಿಗಳನ್ನು ನೋಡಿ ಶ್ರೀಕೃಷ್ಣ ಮಠವನ್ನು ತೆರೆಯುವುದು, ನಿಯಮಾವಳಿಗಳನ್ನು ರೂಪಿಸುವ ಬಗ್ಗೆ ಪರ್ಯಾಯ ಅದಮಾರು ಮಠ ತೀರ್ಮಾನ ತೆಗೆದುಕೊಳ್ಳಲಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

4 seconds ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

29 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

35 minutes ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

42 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago