ಮಂಗಳೂರು; ಮುಂದೆ ಅಧಿಕಾರಕ್ಕೆ ಬರುವ ಸರಕಾರ ಗೋಮಾಂಸವನ್ನು ಸೇವಿಸುವವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಯೋಚಿಸಬೇಕು. ಗೋಭಕ್ಷಕಣೆ ಮಾಡುವ ಪ್ರತಿ ಕುಟುಂಬಕ್ಕೆ ನಾಲ್ಕು ಹಂದಿಗಳನ್ನು ಸಾಕಲು ನೀಡುವ ವ್ಯವಸ್ಥೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿ ಭಾಗದಲ್ಲಿ ನಿರಂತರವಾಗಿ ಗೋವುಗಳನ್ನು ಹಟ್ಟಿಯಿಂದ ತಲವಾರು ಝಳಪಿಸಿ ರಾಜಾರೋಷವಾಗಿ ಕಳ್ಳತನ ಮಾಡಲಾಗುತ್ತಿದೆ. ಇಂತಹ ಘಟನೆಗಳು ಕರಾವಳಿ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋಕಳ್ಳತನಕ್ಕೆ ಬೆಂಬಲ ಸೂಚಿಸುವ ರಾಜಕೀಯ ಪಕ್ಷಗಳು, ಬುದ್ಧಿಜೀವಿಗಳೂ ಸಾಕಷ್ಟು ಜನರಿದ್ದು, ಇವರೆಲ್ಲಾ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಗೋವುಗಳು ಹಿಂದೂಗಳ ಶ್ರದ್ಧೆಯ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರುವ ಪಕ್ಷ ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧ ಮಾಡಬೇಕು. ಹಾಗೂ ಗೋಭಕ್ಷಕರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಮಾಡಬೇಕು ಎಂದು ಒತ್ತಾಯಿಸಿದರು. ಗೋ ಭಕ್ಷಣೆ ಮಾಡುವ ಕುಟುಂಬಗಳಿಗೆ ಸರಕಾರದ ವತಿಯಿಂದಲೇ ನಾಲ್ಕು ಹಂದಿಗಳನ್ನು ನೀಡಿ ಅದನ್ನು ಸಾಕುವ ವ್ಯವಸ್ಥೆಯನ್ನೂ ಸರಕಾರದಿಂದಲೇ ಮಾಡಿಸಬೇಕೆಂದು ಅವರು ಒತ್ತಾಯಿಸಿದರು. ಮಂಗಳೂರಿನ ಕೈರಂಗಳದ ಗೋ ಶಾಲೆಯಿಂದ ಗೋವುಗಳನ್ನು ಕದ್ದ ಗೋ ಕಳ್ಳರನ್ನು ಎರಡು ದಿನಗಳ ಒಳಗೆ ಪೋಲೀಸರು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸಂದರ್ಭದಲ್ಲಿ ಎಚ್ಚರಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…