ದಕ್ಷಿಣ ಕನ್ನಡ

ಗೋಮಾಂಸ ತಿನ್ನುವವರಿಗೆ ಹಂದಿ ಸಾಕಲು ಕೊಡಿ : ಹಿಂದೂ ಜಾಗರಣ ವೇದಿಕೆ

ಮಂಗಳೂರು;  ಮುಂದೆ ಅಧಿಕಾರಕ್ಕೆ ಬರುವ ಸರಕಾರ ಗೋಮಾಂಸವನ್ನು ಸೇವಿಸುವವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಯೋಚಿಸಬೇಕು. ಗೋಭಕ್ಷಕಣೆ ಮಾಡುವ ಪ್ರತಿ ಕುಟುಂಬಕ್ಕೆ ನಾಲ್ಕು ಹಂದಿಗಳನ್ನು ಸಾಕಲು ನೀಡುವ ವ್ಯವಸ್ಥೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿ ಭಾಗದಲ್ಲಿ ನಿರಂತರವಾಗಿ ಗೋವುಗಳನ್ನು ಹಟ್ಟಿಯಿಂದ ತಲವಾರು ಝಳಪಿಸಿ ರಾಜಾರೋಷವಾಗಿ ಕಳ್ಳತನ ಮಾಡಲಾಗುತ್ತಿದೆ. ಇಂತಹ ಘಟನೆಗಳು ಕರಾವಳಿ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋಕಳ್ಳತನಕ್ಕೆ ಬೆಂಬಲ ಸೂಚಿಸುವ ರಾಜಕೀಯ ಪಕ್ಷಗಳು, ಬುದ್ಧಿಜೀವಿಗಳೂ ಸಾಕಷ್ಟು ಜನರಿದ್ದು, ಇವರೆಲ್ಲಾ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಗೋವುಗಳು ಹಿಂದೂಗಳ ಶ್ರದ್ಧೆಯ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರುವ ಪಕ್ಷ ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧ ಮಾಡಬೇಕು. ಹಾಗೂ ಗೋಭಕ್ಷಕರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಮಾಡಬೇಕು ಎಂದು ಒತ್ತಾಯಿಸಿದರು. ಗೋ ಭಕ್ಷಣೆ ಮಾಡುವ ಕುಟುಂಬಗಳಿಗೆ ಸರಕಾರದ ವತಿಯಿಂದಲೇ ನಾಲ್ಕು ಹಂದಿಗಳನ್ನು ನೀಡಿ ಅದನ್ನು ಸಾಕುವ ವ್ಯವಸ್ಥೆಯನ್ನೂ ಸರಕಾರದಿಂದಲೇ ಮಾಡಿಸಬೇಕೆಂದು ಅವರು ಒತ್ತಾಯಿಸಿದರು. ಮಂಗಳೂರಿನ ಕೈರಂಗಳದ ಗೋ ಶಾಲೆಯಿಂದ ಗೋವುಗಳನ್ನು ಕದ್ದ ಗೋ ಕಳ್ಳರನ್ನು ಎರಡು ದಿನಗಳ ಒಳಗೆ ಪೋಲೀಸರು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸಂದರ್ಭದಲ್ಲಿ ಎಚ್ಚರಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago