ಕೋಲ್ಕತ್ತ: ಗೋಮಾಂಸ ತಿನ್ನುವವರು ಅದನ್ನು ಮಾತ್ರವೇ ಏಕೆ, ನಾಯಿ ಮಾಂಸವನ್ನೂ ತಿನ್ನಲಿ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ ಗೋಮಾಂಸ ತಿನ್ನುತ್ತಾರೆ. ಅಂತಹವರಿಗೆ ನಾಯಿ ಮಾಂಸವನ್ನೂ ತಿನ್ನಿ ಎಂದು ನಾನು ಹೇಳುತ್ತೇನೆ. ಅವರು ಯಾವುದೇ ಪ್ರಾಣಿಯ ಮಾಂಸ ತಿನ್ನಲಿ, ಅವರ ಆರೋಗ್ಯ ಚೆನ್ನಾಗಿರಲಿ. ಆದರೆ ರಸ್ತೆಯಲ್ಲೇಕೆ ತಿನ್ನಬೇಕು? ಅವರವರ ಮನೆಯಲ್ಲಿ ತಿನ್ನಲಿ’ ಎಂದು ಹೇಳಿದ್ದಾರೆ.
ಹಸು ನಮ್ಮ ತಾಯಿ. ನಾವು ಹಸುವಿನ ಹಾಲನ್ನು ಸೇವಿಸುವುದರ ಮೂಲಕ ಬದುಕುಳಿಡಿದ್ದೇನೆ, ಆದ್ದರಿಂದ ಯಾರಾದರೂ ನನ್ನ ತಾಯಿಯನ್ನು ನಿಂದಿಸಿದರೆ, ಅವರಿಗೆ ಏನು ಮಾಡಬೇಕು, ಅದನ್ನು ನಾನು ಮಾಡಿಯೇ ತೀರುತ್ತೇನೆ. ಭಾರತದ ಈ ಪುಣ್ಯ ಭೂಮಿಯಲ್ಲಿ ಹಸುವನ್ನು ಕೊಳ್ಳುವುದು ಮತ್ತು ಬೀಫ್ ಸೇವನೆ ಮಾಡುವುದು ಪಾಪ ಎಂದು ಹೇಳಿದ್ದಾರೆ.
ಹೇಳಿಕೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಟಿಎಂಸಿ ಶಾಸಕಿ ನಿರ್ಮಲ್ ಘೋಷ್ ಆರೋಪಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…