Featured

ಗೋವಾ ಚುನಾವಣೆ : ಆಮ್​ ಆದ್ಮಿ ಪಕ್ಷದ ಅಮಿತ್ ಪಾಲೇಕರ್​ ಸಿಎಂ ಅಭ್ಯರ್ಥಿ : ಅರವಿಂದ್ ಕೇಜ್ರಿವಾಲ್ ಘೋಷಣೆ – Vishwanews24

ಗೋವಾ ಚುನಾವಣೆ : ಆಮ್​ ಆದ್ಮಿ ಪಕ್ಷದ  ಅಮಿತ್ ಪಾಲೇಕರ್​ ಸಿಎಂ ಅಭ್ಯರ್ಥಿ : ಅರವಿಂದ್ ಕೇಜ್ರಿವಾಲ್ ಘೋಷಣೆ – Vishwanews24

ಪಣಜಿ : ನಿನ್ನೆ ಪಂಜಾಬ್ ವಿಧಾನಸಭೆಯ ಸಿಎಂ ಅಭ್ಯರ್ಥಿ‌ಯನ್ನ ಘೋಷಿಸಿದ್ದ ಆಮ್ ಆದ್ಮಿ ಪಾರ್ಟಿ‌ ಇಂದು ಗೋವಾ ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನ ಘೋಷಿಸಿದೆ. ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಅಮಿತ್ ಪಾಲೇಕರ್ ಗೋವಾ ರಾಜ್ಯದ ಸಿಎಂ ಅಭ್ಯರ್ಥಿ ಎಂದು ಅರವಿಂದ್ ಕೇಜ್ರಿವಾಲ್ ಪಣಜಿಯಲ್ಲಿ ತಿಳಿಸಿದ್ದಾರೆ.

ಎಎಪಿ ಈ ಬಾರಿ ಗೋವಾದ ಎಲ್ಲಾ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಭಂಡಾರಿ ಸಮುದಾಯದ ಅಮಿತ್ ಸೆಂಟ್ ಕ್ರಜ಼್ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲಿದ್ದಾರೆ.

ಅಮಿತ್ ಪಾಲೇಕರ್ ಅವರು, ಇತ್ತೀಚೆಗಷ್ಟೇ ಹಳೆ ಗೋವಾದ ಯುನೆಸ್ಕೊ ಸಂರಕ್ಷಿತ ನಿವೇಶನದಲ್ಲಿ ನಿರ್ಮಿಸಿರುವ ಶೈನಾ ಎನ್‌ಸಿ ಅಕ್ರಮ ಬಂಗಲೆ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಬಂಡಾರಿ ಸಮುದಾಯದವರನ್ನ (ಒಬಿಸಿ ಸಮುದಾಯ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದಾಗಿ ಇತ್ತೀಚೆಗೆ ಆಪ್ ನಾಯಕರು ಭರವಸೆ ನೀಡಿದ್ದರು. ಪಾಲೇಕರ್ ಅವರ ಹೆಸರನ್ನು ಘೋಷಿಸುವ ಮೊದಲು, ಗೋವಾ ರಾಜ್ಯಕ್ಕೆ ಆಪ್ ಪಕ್ಷವು ಪ್ರಾಮಾಣಿಕ ವ್ಯಕ್ತಿಯನ್ನ ಆಯ್ಕೆ ಮಾಡಿದೆ. ಸಮುದಾಯದ ಕಲ್ಯಾಣ ಕಾರ್ಯಗಳಿಗೆ ಹೆಸರು ವಾಸಿಯಾದ ವ್ಯಕ್ತಿ ಅಮಿತ್. ಗೋವಾದ ಜನಸಂಖ್ಯೆಯಲ್ಲಿ ಭಂಡಾರಿ ಸಮುದಾಯವು ಶೇಕಡ 35% ಇದೆ. ಆದರೆ ರವಿನಾಯಕ್ ಬಿಟ್ಟರೆ ಇದುವರೆಗೂ ಯಾರೂ ಸಿಎಂ ಆಗಿಲ್ಲ. ನಾವು ಜಾತಿ ರಾಜಕಾರಣ ಮಾಡುತ್ತಿಲ್ಲ, ಇತರ ಪಕ್ಷಗಳು ಸಮುದಾಯದ ವಿರುದ್ಧ ರಾಜಕೀಯ ಮಾಡಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago