ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರಕ್ಕೆ ಸಮರ್ಪಿಸಿದರು.
“ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು.
ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…