ಪಣಜಿ : ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮೂರು ಬಾರಿಯ ಶಾಸಕ, 48 ವರ್ಷದ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗುತ್ತಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಪಣಜಿ ಸಮೀಪದ ಬಾಂಬೋಲಿಂ ಶಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಪ್ರಮೋದ್ ಸಾವಂತ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟಗೊಂಡಿತ್ತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು.
ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಬಹುಮತಕ್ಕೆ ಬಿಜೆಪಿಗೆ 1 ಸ್ಥಾನದ ಕೊರತೆ ಇತ್ತು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರ ಶಾಸಕರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಬೆಂಬಲಿಸಿದ್ದು, ಅವರ ನೆರವಿನಿಂದ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…