Featured

ಗೋವುಗಳನ್ನು ಕೊಲ್ಲುವವರು ಮನುಷ್ಯರೇ ಅಲ್ಲ, ಅವರು ರಾಕ್ಷಸ ವರ್ಗಕ್ಕೆ ಸೇರುತ್ತಾರೆ : ಪೇಜಾವರ ಶ್ರೀ -Vishwanews24

ಉಡುಪಿ,: ಕೇಂದ್ರದಲ್ಲಿ ಮೋದಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಗೋರಕ್ಷಣೆಯ ಕುರಿತಂತೆ ಕೇಂದ್ರ ಸರಕಾರದಿಂದ ಇಡೀ ದೆಶಕ್ಕೆ ಅನ್ವಯವಾಗುವ ರೀತಿಯಲ್ಲಿ ಕಾನೂನು ಜಾರಿಯಾಗಲಿ ಎಂದು ಪೇಜಾವರ ಶ್ರೀ ವಿಶ್ವೇಷತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಪರ್ಯಾಯ ಶ್ರೀ ಪಲಿಮಾರು ಮಠದ ಯೋಜನೆಯಾದ ಸುವರ್ಣ ಗೋಪುರ ಶಿಖರ ಪ್ರತಿಷ್ಟಾನ ಮತ್ತು ಬ್ರಹ್ಮಕಲಶಾಭೀಷೇಕ ಮಹೋತ್ಸವ, ದೇಶಿಯ ಗೋವಿನ ತಳಿಗಳ ಸಮ್ಮಿಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರ್ಥಿಕ ದೃಷ್ಟಿಯಿಂದ ಮಾತ್ರವಲ್ಲ, ಧಾರ್ಮಿಕ ದೃಷ್ಟಿಯಿಂದ ಮಾತ್ರವಲ್ಲ, ಮಾನವೀಯ ದೃಷ್ಟಿಯಿಂದಲೂ ಗೋವುಗಳ ರಕ್ಷಣೆ ಅತೀ ಅಗತ್ಯ ಎಂದ ಅವರು ಹಾಲು ಕೊಡುವ ಗೋವನ್ನು ಕಡಿದು ತಿನ್ನುವ ಮನಸ್ಸು ಯಾರಿಗೆ ಬರುತ್ತದೆಯೋ ಅವರು ಮಾನವರೇ ಅಲ್ಲ, ರಾಕ್ಷಸವರ್ಗಕ್ಕೆ ಸೇರಿದವರು. ಗೋಹತ್ಯೆ ಮಾಡಿ ಸೇವಿಸುವುದು ಅತ್ಯಂತ ಹೇಯಕಾರ್ಯ ಎಂದರು.

ಕಾರ್ಯಕ್ರಮದಲ್ಲಿ ಉಡುಪಿಯ ನೀಲಾವರ ಗೋಶಾಲೆ, ಅದಮಾರು ಮಠ ಗೋಶಾಲೆ, ಕೃಷ್ಣ ಮಠದ ಗೋ ಶಾಲೆ, ಸೋದೆ ಮಠ ಗೋ ಶಾಲೆ ಹಾಗೂ ಉಡುಪಿ ಮಂಗಳೂರಿನ ಇತರ ಗೋಶಾಲೆಗಳಲ್ಲಿರು ಭಾರತೀಯ ದೇಸಿ ತಳಿಯ ಗೋವುಗಳನ್ನು ಪ್ರದರ್ಶನಕ್ಕೆ ತರಲಾಗಿತ್ತು.

ಪಲಿಮಾರು ಮಠದ ಪರ್ಯಾಯ ಶ್ರೀ ವಿದ್ಯಾದೀಶತೀರ್ಥರು, ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಯತಿಗಳಾದ, ಶ್ರೀ ಈಶಪ್ರಿಯತೀರ್ಥ ಸ್ವಾಮಿಜಿ ಸೇರಿದಂತೆ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago