Featured

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು , ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಬೇಕು : ಪೇಜಾವರ ಶ್ರೀ -Vishwanews24

ಉಡುಪಿ: ಗೋ ರಕ್ಷಣೆ ಮತ್ತು ಗಂಗಾ ಶುದ್ದೀಕರಣದಿಂದ ಗೋವಿನ ಅನುಗ್ರಹ ಸಿಗುತ್ತದೆ. ಹಿಂದೂ ಧರ್ಮದ ಪವಿತ್ರ ಆರಾಧನೆ ನಡೆಸಲ್ಪಡುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಮಾನ್ಯ ಮಾಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು. ಗೋವಿನ ಸಂರಕ್ಷಣೆ ಜತೆ ಗಂಗಾ ಶುದ್ಧೀಕರಣವಾಗಬೇಕು. ಜಗತ್ತಿಗೆ ಭಾರತ ನೀಡಿದ ಕೊಡುಗೆಗಳಾದ ಯೋಗ ಮತ್ತು ಆಯುರ್ವೇದಗಳನ್ನು ರಾಮದೇವ್‌ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಭಾರತವು ರೋಗಮುಕ್ತ, ಶೀಲಯುಕ್ತ, ಭ್ರಷ್ಟಾಚಾರತ್ಯಕ್ತ, ರಾಷ್ಟ್ರಭಕ್ತ, ಶಕ್ತರಾಷ್ಟ್ರವಾಗ ಬೇಕು ಎಂದು ಅಧ್ಯಕ್ಷತೆ ವಹಿಸಿದ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಈಗ ಕಾಶ್ಮೀರ ಭಾರತದ ಭೂಪಟದಲ್ಲಿ ಸೇರಿದೆ. ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವೂ ಸೇರುವಂತಾಗಲಿ ಎಂದು ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾರೈಸಿದರು.

ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಂಗಾ ನದಿ ದೇಶದ ಪವಿತ್ರ ನದಿಯಾಗಿದ್ದು, ಇದರಲ್ಲಿ ಶುದ್ಧ ನೀರು ಹರಿಯುತ್ತಿತ್ತು. ಆದರೆ, ಇಂದು ಗಂಗಾ ನದಿ ಸಂಪೂರ್ಣ ಕಲುಷಿತಗೊಂಡಿದೆ. ಗಂಗಾಜಲ ಶುದ್ದೀಕರಣ ನಮ್ಮ ದೇಶದ ದುರಂತವಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗಂಗಾ ನದಿ ಶುದ್ಧಗೊಳ್ಳಬೇಕಾದರೆ ಮೊದಲಿಗೆ ಕಾರ್ಖಾನೆಗಳಿಂದ ಬರುವ ತ್ಯಾಜ್ಯ ನೀರನ್ನು ನಿಲ್ಲಿಸಬೇಕೆಂದರು.

ಇನ್ನು ಯೋಗ ಮತ್ತು ಆಯುರ್ವೇದ ಭಾರತ ದೇಶದ ಕೊಡುಗೆಯಾಗಿದೆ. ಈ ಎರಡು ಪದ್ಧತಿಗಳು ಪುರಾತನ ಕಾಲದಿಂದಲೂ ಜಾರಿಯಲ್ಲಿತ್ತು. ಇದು ಜಾತ್ಯಾತೀತವಾದುದು. ಹಿಂದು ಸಂಸ್ಕೃತಿಯ ರಕ್ಷಣೆಗಾಗಿ ಸಂತರು ಹಾಗೂ ಸಮಾಜ ಭಾಂದವರು ಸಾರಥಿಗಳಾಗಬೇಕು ಎಂದು ಪೇಜಾವರ ಸ್ವಾಮೀಜಿ ಕರೆ ನೀಡಿದ್ದಾರೆ.

ನಮ್ಮ ರಾಷ್ಟ್ರ ರೋಗ ಮುಕ್ತ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಆಗಬೇಕೆಂಬ ಆಶಯವನ್ನು ಅವರು ವ್ಯಕ್ತ ಪಡಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago