Featured

ಗೋವ ಸರ್ಕಾರದಿಂದ ಗುಡ್ ನ್ಯೂಸ್ : ಇನ್ನು ಮುಂದೆ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅವಕಾಶ -Vishwanews24

ಪಣಜಿ: ಗೋವಾ ಪ್ರವಾಸ ಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.

ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿ ಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.

ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ ಕುರಿತಂತೆ ನಿರ್ಣಯ ಕೈಗೊಳ್ಳಲಿದೆ. ಆ ಮೂಲಕ ಕದ್ದು ಮುಚ್ಚಿ ಹೆಚ್ಚಿನ ಮದ್ಯದ ಬಾಟೆಲ್‌ ಗಳನ್ನು ಗಡಿ ದಾಟಿಸುವ ಮದ್ಯ ಪ್ರಿಯರು ಇನ್ನು ಮುಂದೆ ರಾಜಾರೋಷವಾಗಿಯೇ ಅಧಿಕೃತವಾಗಿಯೇ ಎರಡಕ್ಕಿಂತಲೂ ಹೆಚ್ಚಿನ ಮದ್ಯದ ಬಾಟೆಲ್‌ಗಳನ್ನು ಇತರೆ ರಾಜ್ಯಗಳಿಗೆ ಕೊಂಡೊಯ್ಯಬಹುದಾಗಿದೆ.

ಇಲ್ಲಿಯ ವರೆಗೂ ಗೋವಾದಲ್ಲಿ ಮಾರುವ ಮದ್ಯವನ್ನು ಡಿಯು ಮತ್ತು ಡಮನ್‌ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟರೆ ಬೇರೆ ರಾಜ್ಯಗಳಿಗೆ ಸಾಗಿಸುವಂತಿರಲಿಲ್ಲ. ಆದರೆ, ಪ್ರಸ್ತುತ ಕಾನೂನು ಎಷ್ಟೇ ಬಿಗಿಯಾಗಿದ್ದರೂ ಕೆಲವು ಪ್ರವಾಸಿಗರು ಚೆಕ್‌ ಪೋಸ್ಟ್‌ಗಳಲ್ಲಿ ಲಂಚ ನೀಡಿಯಾದರೂ, ಹೆಚ್ಚಿನ ಮದ್ಯವನ್ನು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ. ಇಂತಹ ಪ್ರವಾಸಿಗರಿಂದ ಆಗುವ ಲಾಭವನ್ನು ತಾನೇ ಪಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ಈ ಬಗ್ಗೆ ಗೋವಾ ವಿಧಾನಸಭೆಯಲ್ಲಿ  ಸಿಎಂ ಪ್ರಮೋದ್ ಸಾವಂತ್ ಅವರು ಮಾತನಾಡಿದ್ದು, ತಾವು ನೆರೆಯ ರಾಜ್ಯಗಳ ಸರ್ಕಾರದೊಂದಿಗೆ ಈ ಕುರಿತು ಚರ್ಚೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ಗೋವಾ ಪ್ರವಾಸ ಮಾಡಲು ಹೊರಟಿರುವ ಪ್ರವಾಸಿಗರು ಮತ್ತು ಮದ್ಯ ಪ್ರಿಯರಿಗೆ ಇದು ಸಂತಸದ ಸುದ್ಧಿಯಾಗಿದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಬಹುದಾಗಿದೆ.

 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

12 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

58 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago