Featured

ಗೋಶಾಲೆಗಳಿಗೆ ಆರ್ಥಿಕ ಸಹಕಾರದ ಮೂಲಕ ಗೋರಕ್ಷಣೆಗೆ  ಶ್ಲಾಘನೀಯ : ಪೇಜಾವರ ಶ್ರೀ – Vishwanews24

ಗೋಶಾಲೆಗಳಿಗೆ ಆರ್ಥಿಕ ಸಹಕಾರದ ಮೂಲಕ ಗೋರಕ್ಷಣೆಗೆ  ಶ್ಲಾಘನೀಯ : ಪೇಜಾವರ ಶ್ರೀ

ಮೀನುಗಾರರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಯಶ್ ಪಾಲ್ ಸುವರ್ಣ ನೇತೃತ್ವದ ಮೀನು ಮಾರಾಟ ಫೆಡರೇಷನ್ ನೂತನ ಪ್ರಧಾನ ಕಚೇರಿಯ ಶಿಲಾನ್ಯಾಸ ಸಂದರ್ಭದಲ್ಲಿ  ನೀಲಾವರ ಗೋ ಶಾಲೆಗೆ ಧನಸಹಾಯ ನೀಡುವ ಮೂಲಕ ಗೋರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಇದರ ನೂತನ ಪ್ರಧಾನ ಕಚೇರಿ ಸಂಕೀರ್ಣ ಮತ್ಸ್ಯ ಸಂಪದ ಶಿಲಾನ್ಯಾಸ ನೆರವೇರಿಸಿ  ಆಶೀರ್ವಚಿಸಿದರು.
ಸಮಾರಂಭದಲ್ಲಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಪೇಜಾವರ ಶ್ರೀ ಪಾದರ ನೀಲಾವರ ಗೋಶಾಲೆಯ ಶ್ರೀ ಗೋವರ್ಧನ ಗಿರಿ ಟ್ರಸ್ಟಿಗೆ ರೂ.  2.50 ಲಕ್ಷ ಮೊತ್ತದ ಚೆಕ್ಕನ್ನು ನಾಡೋಜ ಡಾ ಜಿ. ಶಂಕರ್ ರವರು ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಡಾ ವೈ ಭರತ್ ಶೆಟ್ಟಿ, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಲಾಲಾಜಿ ಆರ್  ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಗೀತಾನಂದ ಫೌಂಡೇಶನ್‌ ಪ್ರವರ್ತಕರಾದ ಆನಂದ ಸಿ. ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ  ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago