Featured

ಗೋಹತ್ಯೆ ನಿಷೇಧ ಕಾಯ್ದೆ : ಉಲ್ಲಂಘಿಸಿದರೆ ಆರು ವರ್ಷ ಜೈಲು ಶಿಕ್ಷೆ , 10 ಲಕ್ಷ ದಂಡ : ಪ್ರಭು.ಬಿ ಚವ್ಹಾನ್ -Vishwanews24

ಗೋಹತ್ಯೆ ನಿಷೇಧ ಕಾಯ್ದೆ : ಉಲ್ಲಂಘಿಸಿದರೆ ಆರು ವರ್ಷ ಜೈಲು ಶಿಕ್ಷೆ , 10 ಲಕ್ಷ ದಂಡ : ಪ್ರಭು.ಬಿ ಚವ್ಹಾನ್ -Vishwanews24

ಮಂಗಳೂರು: ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಪ್ ಸಚಿವರಾದ ಪ್ರಭು.ಬಿ ಚವ್ಹಾನ್ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮಾತನಾಡಿದರು.

ಗೋಹತ್ಯೆ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ, ಮೊದಲನೇ ಅಪರಾಧಕ್ಕೆ 50 ಸಾವಿರದಿಂದ 5 ಲಕ್ಷದವರೆಗೆ ಹಾಗೂ ಎರಡನೇ ಸಲ ಮಾಡಿದ ಅಪರಾಧಕ್ಕೆ ಒಂದು ಲಕ್ಷದಿಂದ 10 ಲಕ್ಷದ ವೆರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಜಾನುವಾರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಣೆ ಮಾಡುವಾಗ ಪಶು ವೈದ್ಯರಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಸಾಗಾಣಿಕಾ ವಾಹನದಲ್ಲಿ 5-6 ದನಗಳಿಗೆ ಮಾತ್ರ ಅವಕಾಶವಿರುತ್ತದೆ. ಅಲ್ಲದೇ ಜಾನುವಾರುಗಳಿಗೆ ಅಗತ್ಯವಿರುವ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ವಾಹನದಲ್ಲಿ ಇರಬೇಕು ಎಂದರು.

ಗರ್ಭಧಾರಿತ ಜಾನುವಾರುಗಳನ್ನು ಸಾಗಾಣಿಕೆ ಮಾಡಲು ಅವಕಾಶ ನೀಡಬಾರದು. ಜಾನುವಾರುಗಳ ಸಾಗಾಣಿಕೆಯನ್ನು ಮಾಡಲು ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಬೇಸಿಗೆಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೂ ಸಹ ಸಾಗಾಣಿಕೆಯನ್ನು ನಿರ್ಭಂಧಿಸಲಾಗಿದೆ ಎಂದರು.ಈ ಕಾಯ್ದೆ ವ್ಯಾಪ್ತಿಯಲ್ಲಿ ಹಸು, ಕರು ಮತ್ತು ಹೋರಿಗಳು ಸೇರಿವೆ. 13 ವರ್ಷದೊಳಗಿನ ಎಮ್ಮೆ ಹಾಗೂ ಕೋಣಗಳನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ಭರತ್ ವೈ.ಶೆಟ್ಟಿ ಮತ್ತು ವೇದವ್ಯಾಸ್ ಕಾಮತ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಡಿಸಿಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago