Featured

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣಕ್ಕೆ ಕಾನೂನು : ನಳಿನ್ ಕುಮಾರ್ ಕಟೀಲ್ -Vishwanews24

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣಕ್ಕೆ ಕಾನೂನು : ನಳಿನ್ ಕುಮಾರ್ ಕಟೀಲ್ -Vishwanews24

ವಿಜಯಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣ ಮಾಡುವ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ ರಾಜ್ಯ ಪ್ರಕೋಷ್ಠಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಇಲ್ಲ, ನಿರ್ಮಾಣದ ಹೆಸರಿನಲ್ಲಿ ‌ಹಣ ದುರ್ಬಳಕೆಗೆ ಮಾತ್ರ ವಿರೋಧವಿದೆ : HDK -Vishwanews24

ಅಯೋಧ್ಯೆ ಶ್ರೀ ರಾಮನ ಜನ್ಮ ಸ್ಥಳ ಎಂದು ಬಿಜೆಪಿಯಾಗಲಿ, ಆರ್ ಎಸ್ ಎಸ್ ಆಗಲಿ, ಯಾವುದೇ ಸ್ವಾಮೀಜಿಗಳು ಹೇಳಿದ್ದಲ್ಲ, ಈ ದೇಶದ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಾಗಿದೆ. ಆದರೆ, ಅಯೋಧ್ಯೆಯ ವಿವಾದಿತ ಪ್ರದೇಶ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಗೆ ಅವಮಾನ ಮಾಡಿದ್ದಾರೆ ಎಂದು ಹೇಳಿದರು.

ಇದುವರೆಗೆ ಕಾಂಗ್ರೆಸ್ ಗೆ ಸ್ವಾತಂತ್ರ್ಯ ಸಂಗ್ರಾಮದ ಪುಣ್ಯ ಇತ್ತು, ಮಹಾತ್ಮ ಗಾಂಧಿಯವರ ಪುಣ್ಯ ಇತ್ತು. ಆದರೆ, ಈಗ ಕಾಂಗ್ರೆಸ್ ಅಕೌಂಟ್ ಖಾಲಿಯಾಗಿದೆ ಎಂದರು.ರಾಜ್ಯದಲ್ಲಿ ಈ ಹಿಂದೆ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಯುತ್ತಿತ್ತು. ಆದರೆ, ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದರು.

ದೇಶದಲ್ಲಿ ಗಲಭೆ ಸೃಷ್ಟಿಸಲು, ಮೋದಿ ಹೆಸರು ಕೆಡಿಸಲು, ಕಳಂಕ ತರಲು ಷಡ್ಯಂತ್ರ ನಡೆದಿದೆ. ಆದರೆ, ಇಂತಹ ಷಡ್ಯಂತ್ರಗಳಿಗೆ, ಹೋರಾಟಗಳಿಗೆ ಮೋದಿ ಹೆದರುವುದಿಲ್ಲ ಎಂದರು.

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

ಬಿಜೆಪಿ ದೇಶದಲ್ಲಿ ಕೇವಲ ಮತ ಪರಿವರ್ತನೆಯ ರಾಜಕಾರಣ ಮಾಡುತ್ತಿಲ್ಲ, ರಾಷ್ಟ್ರ ಪರಿವರ್ತನೆಯ ರಾಜಕಾರಣ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ, ತುರ್ತು ಪರಿಸ್ಥಿತಿ ಹೇರುವ ಮೂಲಕ ರಾಷ್ಟ್ರ ಭಕ್ತರನ್ನು ಜೈಲಿಗೆ ಹಾಕಿದೆ, ಭ್ರಷ್ಟಾಚಾರ ಮಾಡಿದೆ, ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟಿದೆ, ಸಿಖ್ಖರ ಕಗ್ಗೊಲೆ ಮಾಡಿದೆ, ಕುಟುಂಬ ರಾಜಕಾರಣ ಮಾಡಿದೆ. ಅಧಿಕಾರ ಇಲ್ಲದಿರುವಾಗ ಕಾಂಗ್ರೆಸ್ ಗಲಭೆ ಮಾಡುತ್ತದೆ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

 

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

4 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago