ವಿಜಯಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣ ಮಾಡುವ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ ರಾಜ್ಯ ಪ್ರಕೋಷ್ಠಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಅಯೋಧ್ಯೆ ಶ್ರೀ ರಾಮನ ಜನ್ಮ ಸ್ಥಳ ಎಂದು ಬಿಜೆಪಿಯಾಗಲಿ, ಆರ್ ಎಸ್ ಎಸ್ ಆಗಲಿ, ಯಾವುದೇ ಸ್ವಾಮೀಜಿಗಳು ಹೇಳಿದ್ದಲ್ಲ, ಈ ದೇಶದ ಸುಪ್ರೀಂ ಕೋರ್ಟ್ ನೀಡಿದ ತೀರ್ಪಾಗಿದೆ. ಆದರೆ, ಅಯೋಧ್ಯೆಯ ವಿವಾದಿತ ಪ್ರದೇಶ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಗೆ ಅವಮಾನ ಮಾಡಿದ್ದಾರೆ ಎಂದು ಹೇಳಿದರು.
ಇದುವರೆಗೆ ಕಾಂಗ್ರೆಸ್ ಗೆ ಸ್ವಾತಂತ್ರ್ಯ ಸಂಗ್ರಾಮದ ಪುಣ್ಯ ಇತ್ತು, ಮಹಾತ್ಮ ಗಾಂಧಿಯವರ ಪುಣ್ಯ ಇತ್ತು. ಆದರೆ, ಈಗ ಕಾಂಗ್ರೆಸ್ ಅಕೌಂಟ್ ಖಾಲಿಯಾಗಿದೆ ಎಂದರು.ರಾಜ್ಯದಲ್ಲಿ ಈ ಹಿಂದೆ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಯುತ್ತಿತ್ತು. ಆದರೆ, ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದರು.
ದೇಶದಲ್ಲಿ ಗಲಭೆ ಸೃಷ್ಟಿಸಲು, ಮೋದಿ ಹೆಸರು ಕೆಡಿಸಲು, ಕಳಂಕ ತರಲು ಷಡ್ಯಂತ್ರ ನಡೆದಿದೆ. ಆದರೆ, ಇಂತಹ ಷಡ್ಯಂತ್ರಗಳಿಗೆ, ಹೋರಾಟಗಳಿಗೆ ಮೋದಿ ಹೆದರುವುದಿಲ್ಲ ಎಂದರು.
ಟೂಲ್‌ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಬಿಜೆಪಿ ದೇಶದಲ್ಲಿ ಕೇವಲ ಮತ ಪರಿವರ್ತನೆಯ ರಾಜಕಾರಣ ಮಾಡುತ್ತಿಲ್ಲ, ರಾಷ್ಟ್ರ ಪರಿವರ್ತನೆಯ ರಾಜಕಾರಣ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ, ತುರ್ತು ಪರಿಸ್ಥಿತಿ ಹೇರುವ ಮೂಲಕ ರಾಷ್ಟ್ರ ಭಕ್ತರನ್ನು ಜೈಲಿಗೆ ಹಾಕಿದೆ, ಭ್ರಷ್ಟಾಚಾರ ಮಾಡಿದೆ, ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟಿದೆ, ಸಿಖ್ಖರ ಕಗ್ಗೊಲೆ ಮಾಡಿದೆ, ಕುಟುಂಬ ರಾಜಕಾರಣ ಮಾಡಿದೆ. ಅಧಿಕಾರ ಇಲ್ಲದಿರುವಾಗ ಕಾಂಗ್ರೆಸ್ ಗಲಭೆ ಮಾಡುತ್ತದೆ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…