ಬೆಂಗಳೂರು: “ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ” ಎಂದು ರಾಜ್ಯ ಬಿಜೆಪಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, “ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸಚಿವ ಪ್ರಭು ಚೌಹಾಣ್ ಅವರೊಂದಿಗೆ ಚರ್ಚಿಸಿದ್ದಾರೆ” ಎಂದು ಹೇಳಿದೆ.
“ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಬಿಜೆಪಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ. ರಾಜ್ಯದ ಜನತೆಯ ಅಪೇಕ್ಷೆ ಶೀಘ್ರವಾಗಿ ನೆರವೇರಲಿದೆ” ಎಂದು ತಿಳಿಸಿದೆ.
ಈ ಬಗ್ಗೆ ಸಿ.ಟಿ. ರವಿ ಅವರು ಕೂಡಾ ಟ್ವೀಟ್ ಮಾಡಿದ್ದು, “ರಾಜ್ಯದಲ್ಲಿ ಶೀಘ್ರವೇ ಗೋ ಹತ್ಯೆ ಕಾಯ್ದೆ ಜಾರಿಗೆ ಬರಲಿದೆ. ಮುಂದಿನ ಅಧಿವೇಶದಲ್ಲಿ ಗೋವು ಕಳ್ಳತನ, ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ. ಈ ವಿಚಾರವಾಗಿ ಪ್ರಭು ಚೌಹಾಣ್ ಅವರೊಂದಿಗೆ ಚರ್ಚಿಸಲಾಗಿದೆ” ಎಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…