Featured

ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬೀಳಲಿವೆ : ಸರಕಾರದ ಕಾಯ್ದೆಯ ವಿರುದ್ಧ ಸಿದ್ದರಾಮಯ್ಯ – Vishwanews24

ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬೀಳಲಿವೆ : ಸರಕಾರದ ಕಾಯ್ದೆಯ ವಿರುದ್ಧ ಸಿದ್ದರಾಮಯ್ಯ – Vishwanews24

ಬೆಂಗಳೂರು : ರಾಜ್ಯ ಸರಕಾರ ತಂದಿರುವ ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬಿಳಲಿವೆ ಅಲ್ಲದೆ ಚರ್ಮೋದ್ಯಮದಲ್ಲಿ ಇರುವಂತಹ ಜನರು ತಮ್ಮ ಕೆಲಸಗಳನ್ನು ಕಳೆದುಕೊಂಡು ನಿರುದ್ಯೋಗಿಗಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಕಾಯ್ದೆಯ ವಿರುದ್ಧ ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಕುರಿತು ಮಾತನಾಡಿದ ಅವರು ಈಗಾಗಲೇ ಗೋಹತ್ಯೆ ‌ನಿಷೇಧ ವಿಧೇಯಕ್ಕೆ ಈಗಾಗಲೇ ಹಲವು ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಈಗಾಗಲೇ ಕಾನೂನುಗಳಿವೆಯಾವ ಪ್ರಾಣಿಗಳನ್ನು ವಧೆ ಮಾಡಬಹುದು ಅಂತ 1964 ರ ಗೋಹತ್ಯೆ ‌ನಿಷೇಧ ವಿಧೇಯಕದಲ್ಲಿ ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಗೋಶಾಲೆಗಳಿವೆ, ಇಷ್ಟು ದೊಡ್ಡ ಸಂಖ್ಯೆಯ ರಾಸುಗಳಿಗೆ ವಯಸ್ಸಾದರೆ, ರೋಗ ಬಂದರೆ, ಗಂಡು ಕರು ಹುಟ್ಟಿದರೆ ಏನು ಮಾಡಬೇಕು..?ಈ ಹಸುಗಳನ್ನು ಸಾಕಲು ಸರ್ಕಾರ ರೈತರಿಗೆ ಏನು ಕೊಡುತ್ತದೆ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಎಂಟು ಲಕ್ಷ ಪರಿಶಿಷ್ಟ ಜಾತಿಯ ಜನ ಪ್ರಾಣಿಗಳ ಚರ್ಮ ಸುಲಿಯುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಅಲ್ಲದೆ ಅದರಿಂದಲೇ ಬದುಕುತ್ತಿದ್ದಾರೆ ಇನ್ನು ಮುಂದೆ ಅವರ ಬದುಕಿನ ದಾರಿ ಹೇಗೆ ಎಂದರು.

ಮೋದಿ ಸರ್ಕಾರ ಬಂದ ಮೇಲೆ ಮಾಂಸದ ರಫ್ತು ಹೆಚ್ಚಾಗಿದೆ ಎಂದಿದ್ದಾರೆ ಆದರೆ ನೀವು ಅದನ್ನು ನಿಯಂತ್ರಣ ಮಾಡಿದ್ದೀರಾ..?
ದೇಶದಲ್ಲಿ ಹೆಚ್ಚಿನ ಜನ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ, ಅಲ್ಲದೆ ನಮ್ಮ ದೇಶ ಚರ್ಮೋದ್ಯಮದಲ್ಲಿ ಎರಡನೇ ಸ್ಥಾನದಲ್ಲಿದೆ, ಆ ಇಂಡಸ್ಟ್ರಿ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ, ಈಗ ಈ ಉದ್ಯಮ ನಿಂತು ಹೋದರೆ ಚರ್ಮದ ಉದ್ಯಮದಿಂದ 5.5 ಬಿಲಿಯನ್ ಡಾಲರ್ ಆದಾಯ ದೇಶಕ್ಕೆ ನಷ್ಟವಾಗಲಿದೆ ಎಂದು ಗುಡುಗಿದರು.

ನಿರುದ್ಯೋಗ ದೇಶದಲ್ಲಿ ಹೆಚ್ಚಾಗುತ್ತೆಇಡೀ ದೇಶಕ್ಕೇ ಅನ್ವಯವಾಗುವಂತಹ ಒಂದು ಪಾಲಿಸಿ ತಯಾರು ಮಾಡಿ, ಅದಕ್ಕಾಗಿ ಕೇಂದ್ರದ ಸರ್ಕಾರವೇ ಒಂದು ತಜ್ಞರ ಸಮಿತಿ ರಚಿಸಲಿ ಆ ವರದಿಯನ್ನು ಜನರ ಮುಂದಿಡಲಿ ಜೊತೆಗೆ ಆ ವಿಷಯದ ಬಗ್ಗೆ ಚರ್ಚೆ ಆಗಲೀ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು. ಅನುತ್ಪಾದಕ ಹಸುಗಳನ್ನು ಸರ್ಕಾರವೇ ಕೊಂಡುಕೊಳ್ಳಲಿ ರೈತರ ಮೇಲೆ ಯಾಕೆ ಹೊರೆ ಹಾಕುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago