ಬೆಂಗಳೂರು: ಬಿಜೆಪಿ ಸರ್ಕಾರ ಗೋಹತ್ಯೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, “ರಾಜ್ಯ ಸರ್ಕಾರದ ಜಾರಿಗೊಳಿಸಿರುವ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ಕೂಡ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ” ಎಂದರು.
ಸದ್ಯ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ-1964 ಜಾರಿಯಲ್ಲಿದೆ. 2010ರಲ್ಲೂ ಕಾಯ್ದೆಯಲ್ಲಿ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರಕಾರ ಯತ್ನಿಸಿತ್ತು. ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜತೆಯಾಗಿ ವಿರೋಧಿಸಿದ್ದವು. ತಾನು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದೆ. ಬಳಿಕ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಆ ಬಳಿಕ ಸರಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ಹಿಂಪಡೆಯಲಾಯಿತು. ಹಳೆಯ ಕಾಯ್ದೆಯೇ ಜಾರಿಯಲ್ಲಿ ಉಳಿದಿದೆ ಎಂದು ಹೇಳಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…