Featured

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ

ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ

ಮಂಗಳೂರು: ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನೂ ಓದಿ:

ಇದೇ ವೇಳೆ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಕಾನೂನು ಕೈಗೆತ್ತಿಕೊಳ್ಳುವ ಘಟನೆಗಳನ್ನು ತಕ್ಷಣ ತಡೆಗಟ್ಟಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ, ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡು ಅದನ್ನು ಸಾಮಾಜಿಕ ಮಾಧ್ಯಮದಿಂದ ಹಿಡಿದು ರಾಷ್ಟ್ರೀಯ ಮಾಧ್ಯಮದವರೆಗೆ ತಮಗೆ ಬೇಕಾದಂತೆ ಚರ್ಚೆ ನಡೆಸಿ ಸುಳ್ಳನ್ನು ಸತ್ಯವೆಂದು ಪ್ರಚಾರ ಪಡಿಸುತ್ತಿದೆ‌. ಇದರ ವಿರುದ್ದ ಯಶಸ್ವಿಯಾಗುವಲ್ಲಿ ಜಾತ್ಯಾತೀತ ಪಕ್ಷಗಳು ವಿಫಲವಾಗಿದೆ. ಇದರಿಂದ ಬಿಜೆಪಿ ದೇಶವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದೆ.

ಇದನ್ನೂ ಓದಿ:

ಗೋ ಸಾಗಾಟಗಾರನ್ನು ತಡೆಯುವ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಕೆಲವೊಮ್ಮೆ ಪೋಲಿಸ್ ಇಲಾಖೆ ಕೂಡ ಸಾಥ್ ನೀಡುತ್ತದೆ. ಗೋ ಸಾಗಾಟಗಾರನ್ನು ಠಾಣೆಗೆ ಕರೆದೊಯ್ಯುವ ಪೋಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸುತ್ತದೆ. ಆದರೆ ಕಾನೂನು ಕೈಗೆತ್ತಿಕೊಂಡ ಸಂಘಪರಿವಾರದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇವರಿಗೆ ನೈತಿಕ ಪೋಲಿಸ್ ಗಿರಿ ಮಾಡಲು ಅನುಮತಿ ನೀಡಿದವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ಬದಲು ಗಲಭೆಕೋರರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುತ್ತದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

9 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago