ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ : ಬಸವರಾಜ್ ಬೊಮ್ಮಾಯಿ -Vishwanews24
ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ಗೋ ಹತ್ಯೆ ನಿಷೇಧ ಚರ್ಚೆ ಆರಂಭವಾಗಿದೆ. ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಸೋಮವಾರ ಹೇಳಿದರು.
“ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೇಂದ್ರ ಸರ್ಕಾರ 60ರ ದಶಕದಲ್ಲಿ ಜಾರಿ ಮಾಡಿದೆ. ಇದರಲ್ಲಿ ಏನೂ ಹೊಸದಿಲ್ಲ. ನಮ್ಮ ರಾಜ್ಯ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿಯೂ ಗೋ ಹತ್ಯೆ ಜಾರಿಯಲ್ಲಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆದರೆ ಗೋಹತ್ಯೆ ನಿಲ್ಲಿಸುವುದರಲ್ಲಿ ಎರಡು ಮಾತಿಲ್ಲ,” ಎಂಬುದಾಗಿ ಬಸವರಾಜ ಬೊಮ್ಮಾಯಿ ವಿವರಿಸಿದರು.
