Featured

ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ : ಖಾದರ್ -Vishwanews24

ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ : ಖಾದರ್ -Vishwanews24

ಇತರೆ ಕಾನೂನು ರಾತ್ರಿ ಬೆಳಗಾಗುವುದರೊಳಗೆ ಜಾರಿಗೆ ತಂದಿದ್ದೀರಿ, ಗೋ ಹತ್ಯೆ ನಿಷೇಧ ತಡವೇಕೆ ??

ಮಂಗಳೂರು: ರಾಜ್ಯದಲ್ಲೀಗ ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಲಿದೆ. ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳುತ್ತಲ್ಲೇ ಇದ್ದು ಈವರೆಗೂ ಜಾರಿಗೆ ಬಂದಿಲ್ಲ. ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ನಿರಂತರವಾಗಿ ಹೇಳುತ್ತಲ್ಲೇ ಇರುವ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಖಾದರ್‌, ”ಎಪಿಎಂಸಿ ಕಾನೂನು ರಾತ್ರಿ ಬೆಳಗಾಗುವುದರೊಳಗೆ ತಂದಿದ್ದೀರಿ. ನಿಮಗೆ ಎಲ್ಲಾ ಕಾನೂನನ್ನು ರಾತ್ರಿ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ”ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ. ಹಾಗಿರುವಾಗ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಬಗ್ಗೆ ಎರಡು ತಿಂಗಳಿನಿಂದ ಬರೀ ಚರ್ಚೆ ಯಾಕೆ? ಈ ಬಗ್ಗೆ ಸಂಪುಟ ಪ್ರಸ್ತಾಪ ಮಾಡಿ, ಚರ್ಚಿಸುವ” ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ.

”ಈ ಗ್ರಾಮ ಪಂಚಾಯತಿ ಚುನಾವಣೆ ಸಮೀಪವಾಗುತ್ತಿರುವ ನಿಟ್ಟಿನಲ್ಲಿ ಬಿಜೆಪಿಯು ಬರೀ ಭಾವಾನಾತ್ಮಕ ವಿಚಾರಗಳನ್ನು ತೆಗೆದುಕೊಂಡು ಬಂದು ಜನರನ್ನು ವಿಭಜಿಸಿ ಮತ ಪಡೆಯುವ ತಂತ್ರ ನಡೆಸುತ್ತಿದೆ. ಬದಲಾಗಿ ಅವರು ಈ ಕಾನೂನನ್ನು ಜಾರಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

”ಗೋ ಹತ್ಯೆ ನಿಷೇಧ ತರುತ್ತೇವೆ ಎಂದು ಹಲವು ವರ್ಷಗಳಿಂದ ಹೇಳಿಕೊಂಡೇ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಬಿಜೆಪಿ ಸರ್ಕಾರ ಬಂದ ಬಳಿಕ ಭಾರತದಿಂದಲ್ಲೇ ವಿದೇಶಗಳಿಗೆ ಹೆಚ್ಚು ಗೋ ಮಾಂಸ ರಫ್ತಾಗುತ್ತಿದೆ. ಆದರೆ ಅವರಿಗೆ ಕಾನೂನು ಜಾರಿಗೆ ತರಲು ಆಗಿದೆಯೇ? ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ” ಎಂದಿದ್ದಾರೆ.

”ರಾಜ್ಯದಲ್ಲಿ ಇಷ್ಟು ವರ್ಷ ಬಿಜೆಪಿ ಸರ್ಕಾರವಿದೆ. ಈವರೆಗೆ ಅವರು ಯಾಕೆ ಈ ಕಾನೂನುಗಳ ಬಗ್ಗೆ ಮಾತನಾಡಿಲ್ಲ. ಬರೀ ಜನರಲ್ಲಿ ಗೊಂದಲ ಮೂಡಿಸಲು ಈ ವಿಚಾರಗಳನ್ನು ಮಾತನಾಡುತ್ತಾರೆ. ಬರೀ ಹೊರಗಡೆ ಈ ಕಾನೂನುಗಳ ಬಗ್ಗೆ ಮಾತನಾಡುವುದರ ಹೊರತಾಗಿ ಸಂಪುಟದಲ್ಲಿ ಈ ವಿಚಾರದ ತನ್ನಿ ನಾವು ಚರ್ಚೆ ನಡೆಸುತ್ತೇವೆ. ಅದರ ಬದಲಾಗಿ ಜನರ ನಡುವೆ ಈ ವಿಚಾರ ತಂದು ಗಲಭೆ ಎಬ್ಬಿಸುವುದೇಕೆ?” ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago