ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್ ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಸಚಿವ ಪ್ರಭು ಚೌಹಾಣ್, ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 2010ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷದ ಎಮ್ಮೆ/ಕೋಣಗಳಿಗೆ ನಿರ್ಬಂಧ ವಿರುತ್ತದೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಕಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು.
2019ರ ಜಾನುವಾರು ಗಣತಿ ಪ್ರಕಾರ 2, 38, 296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು 662 ಗೋವುಗಳ ವಧೆಗೆ ಕಾರಣವಾಗುತ್ತದೆ ಇದು ಎಚ್ಚರಿಕೆಯ ಗಂಟೆ ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…