ಮಂಗಳೂರು : ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕರಾವಳಿಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಕುರಿತಂತೆ ನಾವು ಮಾತುಕತೆ ನಡೆಸಿ ಠರಾವು ಮಂಡಿಸಿದ್ದು, ಒಂದು ವೇಳೆ ಇವುಗಳನ್ನು ಸರಕಾರ ರದ್ದುಗೊಳಿಸಿದರೆ ಸಾಮಾಜದಲ್ಲಿ ಸಾಮರಸ್ಯಕ್ಕೆ ತೊಂದರೆ ಉಂಟಾಗಲಿದೆ. ಇದಕ್ಕೆ ಸರಕಾರ ಖಂಡಿತಾ ಅವಕಾಶ ನೀಡದಿರಲಿ. ಗೋಹತ್ಯೆ, ಮತಾಂತರ ಕಾಯಿದೆ ನಿಷೇಧ ಬಳಿಕ ಸಮಾಜದಲ್ಲಿ ಶಾಂತಿ-ನೆಮ್ಮದಿಯಿದೆ. ರಾಜ್ಯ ಸರಕಾರವು ಅದಕ್ಕೆ ಪೂರಕ ವಾತಾವರಣ ನಿರ್ಮಿಸಲಿ ಎಂದರು.
ಕರಾವಳಿ ಸ್ವಾಮೀಜಿಗಳು ಒಟ್ಟು ಸೇರಿ ಸಾಮೂಹಿಕ ನಿರ್ಣಯ ಮಾಡಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020ನ್ನು ರದ್ದುಗೊಳಿಸುವ ಪ್ರಸ್ತಾಪವ ಸಾಮೂಹಿಕವಾಗಿ ವಿರೋಧಿಸುವುದಾಗಿ ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…