ಬೆಂಗಳೂರು: ಸೇವೆಯ ಹೆಸರಲ್ಲಿ ರಾಜ್ಯದಲ್ಲಿ ಮತಾಂತರ ನಡೆಯುತ್ತಿತ್ತು,ಇದೀಗ ಮತಾಂತರ ನಿಷೇಧ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ವಿಚಾರವಾಗಿ ಮಾತನಾಡಿ, ಬಹಳ ಸಂತೋಷದ ವಿಚಾರವಿದು.ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೆವು. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಎಂದರು.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಗೋ ಹತ್ಯೆ , ಮತಾಂತರ ನಿಷೇಧ ವಿಧೇಯಕ ಎರಡು ಇದೀಗ ಅಂಗೀಕಾರ ಆಗಿದೆ. ಇದರಿಂದ ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಇವಾಗ ಹೆಮ್ಮೆ ಆಗುತ್ತಿದೆ ಎಂದರು. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಮತಾಂತರದ ಮೂಲಕ ಧರ್ಮ ಒಡೆಯಲಾಗಿತ್ತು.
ಸೇವೆಯ ಹೆಸರಲ್ಲಿ ಮತಾಂತರ ಮಾಡಲಾಗಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದ ಅವರು, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಾ ಬಂದಿದೆ. ಇವಾಗ ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದರು.
ಇನ್ನು ಮತಾಂತರ ನಿಷೇಧ ವಿಧೇಯಕದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ವಿಧೇಯಕಗಳನ್ನು ಸರ್ಕಾರ ತರುತ್ತಿದೆ. ಆದರೆ ವಿಧೇಯಕಗಳ ಬಗ್ಗೆ ಗಂಭೀರವಾಗಿ ಚರ್ಚೆಯಾಗಬೇಕು. ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಆದರೆ ಉತ್ತರ ಕೊಡದೆ ಗೊಂದಲ ಮೂಡಿಸುತ್ತಿದ್ದಾರೆ ಎಂದರು.
ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24
ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಧಾರ್ಮಿಕ ಹಕ್ಕು ಸ್ವಾತಂತ್ರ್ಯ ವಿಧೇಯಕ ಗೊಂದಲದಲ್ಲಿದೆ. ಇದರಲ್ಲಿ ಸ್ವಾತಂತ್ರ್ಯ ಕೊಡುವ ಹಕ್ಕಿಲ್ಲ. ಇದು ಧಾರ್ಮಿಕ ಹಕ್ಕು ಕಸಿಯುವ ವಿಧೇಯಕ. ಆರ್ಟಿಕಲ್ 25, 28 ನಿಯಮಗಳನ್ನ ಉಲ್ಲಂಘಿಸಿದೆ.
ನಮ್ಮ ಧರ್ಮ ಆಚರಣೆ ಮಾಡುವ ಹಕ್ಕಿದೆ ನಮಗಿದೆ. ಎಲ್ಲರಿಗೂ ಅವರವರ ಧರ್ಮ ಆಚರಣೆ ಹಕ್ಕಿದೆ. ಆದರೆ ಇವಾಗ ಕಾಯ್ದೆಯಿಂದ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…