Featured

ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆಗಳನ್ನು ನಾನು ಗೃಹ ಸಚಿವನಾಗಿದ್ದಾಗ ಜಾರಿಗೊಳಿಸಿದ್ದಕ್ಕೆ ಹೆಮ್ಮೆಯಾಗುತ್ತಿದೆ : ಆರಗ ಜ್ಞಾನೇಂದ್ರ – Vishwanews24

ಮತಾಂತರದ ಮೂಲಕ ಧರ್ಮ ಒಡೆಯುವುದನ್ನು ಕಾಯ್ದೆಯ ಮೂಲಕ ತಪ್ಪಿಸಲಾಗಿದೆ.

ಬೆಂಗಳೂರು: ಸೇವೆಯ ಹೆಸರಲ್ಲಿ ರಾಜ್ಯದಲ್ಲಿ ಮತಾಂತರ ನಡೆಯುತ್ತಿತ್ತು,ಇದೀಗ ಮತಾಂತರ ನಿಷೇಧ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ವಿಚಾರವಾಗಿ ಮಾತನಾಡಿ, ಬಹಳ ಸಂತೋಷದ ವಿಚಾರವಿದು.ಬೆಳಗಾವಿ‌ ಅಧಿವೇಶನದ‌‌ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೆವು. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಎಂದರು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗೋ ಹತ್ಯೆ , ಮತಾಂತರ ನಿಷೇಧ ವಿಧೇಯಕ ಎರಡು‌ ಇದೀಗ ಅಂಗೀಕಾರ ಆಗಿದೆ.‌ ಇದರಿಂದ ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಇವಾಗ ಹೆಮ್ಮೆ ಆಗುತ್ತಿದೆ ಎಂದರು. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಮತಾಂತರದ ಮೂಲಕ ಧರ್ಮ ಒಡೆಯಲಾಗಿತ್ತು.

ಸೇವೆಯ ಹೆಸರಲ್ಲಿ ಮತಾಂತರ ‌ಮಾಡಲಾಗಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದ ಅವರು, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಾ ಬಂದಿದೆ. ಇವಾಗ ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದರು.

ಇನ್ನು ಮತಾಂತರ ನಿಷೇಧ ವಿಧೇಯಕದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ವಿಧೇಯಕಗಳನ್ನು ಸರ್ಕಾರ ತರುತ್ತಿದೆ. ಆದರೆ ವಿಧೇಯಕಗಳ ಬಗ್ಗೆ ಗಂಭೀರವಾಗಿ ಚರ್ಚೆಯಾಗಬೇಕು. ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಆದರೆ ಉತ್ತರ ಕೊಡದೆ ಗೊಂದಲ ಮೂಡಿಸುತ್ತಿದ್ದಾರೆ ಎಂದರು.

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಧಾರ್ಮಿಕ ಹಕ್ಕು ಸ್ವಾತಂತ್ರ್ಯ ವಿಧೇಯಕ ಗೊಂದಲದಲ್ಲಿದೆ. ಇದರಲ್ಲಿ ಸ್ವಾತಂತ್ರ್ಯ ಕೊಡುವ ಹಕ್ಕಿಲ್ಲ. ಇದು ಧಾರ್ಮಿಕ ಹಕ್ಕು ಕಸಿಯುವ ವಿಧೇಯಕ. ಆರ್ಟಿಕಲ್ 25, 28 ನಿಯಮಗಳನ್ನ ಉಲ್ಲಂಘಿಸಿದೆ.

ನಮ್ಮ‌ ಧರ್ಮ ಆಚರಣೆ ಮಾಡುವ ಹಕ್ಕಿದೆ ನಮಗಿದೆ. ಎಲ್ಲರಿಗೂ ಅವರವರ ಧರ್ಮ ಆಚರಣೆ ಹಕ್ಕಿದೆ. ಆದರೆ ಇವಾಗ ಕಾಯ್ದೆಯಿಂದ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago