Featured

ಗೌತಮ್ ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ ಕೋರ್ಟ್ ಆದೇಶ – vishwanews24

ಗೌತಮ್ ಅದಾನಿ ಮತ್ತು ಇತರರ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ ಕೋರ್ಟ್ ಆದೇಶ

ವಾಷಿಂಗ್ಟನ್ : ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಇತರರ ವಿರುದ್ಧದ ಮೂರು ಪ್ರಕರಣಗಳನ್ನು( ಸಿವಿಲ್‌ ಮತ್ತು ಕ್ರಿಮಿನಲ್) ಜಂಟಿಯಾಗಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ ಕೋರ್ಟ್ ಆದೇಶಿಸಿದೆ.

ಯುಎಸ್ vs ಅದಾನಿ ಮತ್ತು ಇತರರು(ಕ್ರಿಮಿನಲ್ ಪ್ರಕರಣ), ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್(SEC) vs ಅದಾನಿ ಮತ್ತು ಇತರರು(ಸಿವಿಲ್ ಪ್ರಕರಣ), ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ vs ಅಜ್ಯೂರ್ ಪವರ್ ಗ್ಲೋಬಲ್ ಲಿಮಿಟೆಡ್‌ ನ ಸಿರಿಲ್ ಕ್ಯಾಬೆನ್ಸ್ ಇತರರ ವಿರುದ್ಧದ ಸಿವಿಲ್ ಪ್ರಕರಣವನ್ನು ಜಂಟಿಯಾಗಿ ತನಿಖೆ ನಡೆಸುವಂತೆ ಯುಎಸ್ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಂಗದ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಂಘರ್ಷಗಳನ್ನು ತಪ್ಪಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಅದಾನಿ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಅದಾನಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆ ನಡೆಸುತ್ತಿರುವ ಜಿಲ್ಲಾ ನ್ಯಾಯಾಧೀಶ ನಿಕೋಲಸ್ ಜಿ ಗರೌಫಿಸ್ ಅವರಿಗೆ ವಹಿಸಲಾಗಿದೆ.

ವಿದ್ಯುತ್ ವಿತರಣಾ ಕಂಪೆನಿಗಳಿಂದ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಅದಾನಿ ಮತ್ತು ಇತರರು ಸುಮಾರು 2,029 ಕೋಟಿ ರೂ. ಲಂಚವನ್ನು ಪಾವತಿಸಿದ್ದಾರೆ ಎಂದು ಯುಎಸ್ ಪ್ರಾಸಿಕ್ಯೂಟರ್‌ ಗಳು ಆರೋಪಿಸಿದ್ದರು. ಅಮೆರಿಕದ ಕೋರ್ಟ್‌ ಗೆ ಈ ಕುರಿತು ಆರೋಪಪಟ್ಟಿ ಕೂಡ ಸಲ್ಲಿಸಲಾಗಿದ್ದು, ಇದರ ಬೆನ್ನಲ್ಲೇ, ಅವರ ಬಂಧನಕ್ಕೆ ಕೋರ್ಟ್ ವಾರಂಟ್ ಹೊರಡಿಸಿತ್ತು. ಆದರೆ ಅದಾನಿ ಗ್ರೂಪ್ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿ ನಮ್ಮದು ಕಾನೂನು ಪಾಲಿಸುವ ಸಂಸ್ಥೆಯಾಗಿದೆ ಎಂದು ಹೇಳಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago