ಕ್ರೇಜಿಸ್ಟಾರ್ ರವಿಚಂದ್ರನ್ ಕಲಾವಿದನಾಗಿ ಸಾಕಷ್ಟು ವರ್ಷಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಹಲವಾರು ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟ ರವಿಚಂದ್ರನ್ ಅವರ ಸಾಧನೆಯನ್ನು ಗುರುತಿಸಿ ಇಂದು ಬೆಂಗಳೂರು ವಿಶ್ವವಿದ್ಯಾನಿಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.
ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಇನ್ನು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.
ಇನ್ನು ಕಾರ್ಯಕ್ರಮದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನು ಈ ವೇಳೆ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು. ಈ ಸುದ್ದಿ ಕೇಳಿ ಕ್ರೇಜಿಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…