Featured

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ  ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌  ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌, ಏಳನೇ ಆರೋಪಿ ಸುರೇಶ್‌ ಎಚ್‌.ಎಲ್‌ ಅಲಿಯಾಸ್‌ ಟೀಚರ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಅಲಿಯಾಸ್‌ ನವೀನ್‌ಗೆ ಜಾಮೀನು ದೊರೆತಿದೆ.

ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.

11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago