ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್, ಏಳನೇ ಆರೋಪಿ ಸುರೇಶ್ ಎಚ್.ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ.ಟಿ ನವೀನ್ ಕುಮಾರ್ ಅಲಿಯಾಸ್ ನವೀನ್‌ಗೆ ಜಾಮೀನು ದೊರೆತಿದೆ.
ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.
11ನೇ ಆರೋಪಿ ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್ “ಮೋಹನ್ ನಾಯಕ್ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್ ನಾಯಕ್. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…