Featured

ಗೌರಿ ಹತ್ಯೆ ಪ್ರಕರಣದ ಆರೋಪಿ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ – ಮುತಾಲಿಕ್

ಮಂಗಳೂರು, : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೌರಿ ಹತ್ಯೆ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆ ಭಾಗಿಯಾಗಿದ್ದಾನೆಂಬುದನ್ನು ನಾನು ಒಪ್ಪಲಾರೆ. ಆದರೆ, ವಾಗ್ಮೋರೆ ಆರ್’ಎಸ್ಎಸ್ ಸದಸ್ಯ ಎಂದು ಹೇಳಿದ್ದಾರೆ.

ಮಾನವೀಯತೆಯ ಆಧಾರದ ಮೇರೆಗೆ ವಾಗ್ಮೋರೆ ಕುಟುಂಬಸ್ಥರನ್ನು ಸಂಘಟನೆ ಭೇಟಿ ಮಾಡಿತ್ತು. ಹಲವು ಆರೋಪಗಳ ಮೇರೆಗೆ ಇತ್ತೀಚಿನ ದಿನಗಳಲ್ಲಿ ಹಿಂದು ಕಾರ್ಯಕರ್ತರನ್ನು ಗುರಿ ಮಾಡಲಾಗುತ್ತಿದೆ. ಗೌರಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರ ಕುರಿತು ಸೂಕ್ತ ರೀತಿಯ ಸಾಕ್ಷ್ಯಾಧಾರಗಳು ಪೊಲೀಸರ ಬಳಿಯಿಲ್ಲ. ಈ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದಿದ್ದಾರೆ.

ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಇದ್ದದ್ದು ಆರ್‌ಎಸ್‌ಎಸ್ ಕಾರ್ಯಕರ್ತರು. ಪರಶುರಾಮ್ ವಾಗ್ಮೋರೆ ಸಹ ಅದೇ ಪ್ರಕರಣದಲ್ಲಿ ಇದ್ದ. ಹಾಗಾಗಿ ಆತ ಆರ್‌ಎಸ್‌ಎಸ್‌ ಕಾರ್ಯಕರ್ತ ಇರಬಹುದು ಎಂದು ಅವರು ಹೇಳಿದ್ದಾರೆ.

ಒಂದು ಚಿತ್ರ ಇಟ್ಟುಕೊಂಡು ಶ್ರೀರಾಮಸೇನೆಗೆ ಕೆಟ್ಟ ಹೆಸರು ಬಳಿಯುವ ಯತ್ನ ಮಾಡಲಾಗುತ್ತಿದೆ. ಸನಾತನ ಸಂಸ್ಥೆಯನ್ನು ನಿಷೇಧ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ವಿಚಾರವಾದಿಗಳು, ಯೋಧರ, ವಿಜ್ಞಾನಿಗಳ ಹತ್ಯೆ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ವಾಗ್ಮೋರೆ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಮದುವೆ ಅಥವಾ ಯಾವುದೋ ಕಾರ್ಯಕ್ರಮದಲ್ಲಿ ತೆಗೆದಿರುವ ಫೋಟೋಗಳು ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

13 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

20 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

36 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

45 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

57 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago