ನವದೆಹಲಿ: ಕರಾವಳಿ ಮೂಲದ , ಮುಂಬೈ ನಲ್ಲಿ ಗ್ಯಾಂಗ್ ಸ್ಟಾರ್ ಆಗಿದ್ದ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ದೇಶದಿಂದ ಹಸ್ತಾಂತರಿಸಿಲಾಗಿದ್ದು , ನಿನ್ನೆ (ಮಂಗಳವಾರ )ರಾತ್ರಿ ಭಾರತಕ್ಕೆ ಕರೆತರಲಾಗಿದೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಂಡರ್‌ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿ ಬಳಿಕ ತನ್ನದೇ ನಟೋರಿಯಸ್ ಗ್ಯಾಂಗ್ ಕಟ್ಟಿಕೊಂಡು ಮುಂಬೈನಲ್ಲಿ ಬಾರ್ ಮಾಲೀಕರಿಂದ, ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿ ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಮತ್ತು ಡೊಂಬಿವಿಲಿಯಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ.
ದೆಹಲಿಗೆ ಕರೆತಂದ ಬಳಿಕ ಪೂಜಾರಿಯನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದು, ಆ ಬಳಿಕ ಆತನನ್ನು ಮುಂಬೈ ಪೊಲೀಸರಿಗೆ ಕಸ್ಟಡಿಗೆ ಒಪ್ಪಿಸುವ ಸಾಧ್ಯತೆ ಇದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…