Featured

ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ನಿಂದ  ಭಾರತಕ್ಕೆ ಕರೆತಂದ ಅಧಿಕಾರಿಗಳು – VIshwanews24

ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ನಿಂದ  ಭಾರತಕ್ಕೆ ಕರೆತಂದ ಅಧಿಕಾರಿಗಳು – VIshwanews24

ನವದೆಹಲಿ: ಕರಾವಳಿ ಮೂಲದ , ಮುಂಬೈ ನಲ್ಲಿ ಗ್ಯಾಂಗ್ ಸ್ಟಾರ್ ಆಗಿದ್ದ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ದೇಶದಿಂದ ಹಸ್ತಾಂತರಿಸಿಲಾಗಿದ್ದು , ನಿನ್ನೆ (ಮಂಗಳವಾರ )ರಾತ್ರಿ ಭಾರತಕ್ಕೆ ಕರೆತರಲಾಗಿದೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಡರ್‌ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿ ಬಳಿಕ ತನ್ನದೇ ನಟೋರಿಯಸ್ ಗ್ಯಾಂಗ್ ಕಟ್ಟಿಕೊಂಡು ಮುಂಬೈನಲ್ಲಿ ಬಾರ್ ಮಾಲೀಕರಿಂದ, ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿ ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಮತ್ತು ಡೊಂಬಿವಿಲಿಯಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ.

ದೆಹಲಿಗೆ ಕರೆತಂದ ಬಳಿಕ ಪೂಜಾರಿಯನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದು, ಆ ಬಳಿಕ ಆತನನ್ನು ಮುಂಬೈ ಪೊಲೀಸರಿಗೆ ಕಸ್ಟಡಿಗೆ ಒಪ್ಪಿಸುವ ಸಾಧ್ಯತೆ ಇದೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago