Featured

ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರ ಸಂಕಷ್ಟ ನಿವಾರಿಸಿ :ಸರಕಾರಕ್ಕೆ ಬಿ.ವೈ. ವಿಜಯೇಂದ್ರ  ಆಗ್ರಹ – vishwanews24

ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ  : ಬಿ.ವೈ. ವಿಜಯೇಂದ್ರ

ಬೆಂಗಳೂರು : ರಾಜ್ಯ ಸರಕಾರ ಎಚ್ಚತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಮರ್ಪಕವಾಗಿ ಆರೇಳು ತಾಸು ವಿದ್ಯುತ್ ಕೊಡಲು ರಾಜ್ಯ ಸರಕಾರದಿಂದ ಆಗುತ್ತಿಲ್ಲ; ರೈತರಿಗೆ ಯಾವಾಗ ಕರೆಂಟ್ ಬರುತ್ತದೆ; ಯಾವಾಗ ಇರುವುದಿಲ್ಲ ಎಂದು ತಿಳಿಯದಂತಾಗಿದೆ. ಇಲಾಖೆಯವರು ರಾತ್ರಿ 10 ಗಂಟೆಯಿಂದ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. ರೈತರು ಹೊಲದಲ್ಲಿ ಕಾದರೂ 12 ಗಂಟೆವರೆಗೂ ವಿದ್ಯುತ್ ಬರುವುದಿಲ್ಲ ಎಂದು ಆಕ್ಷೇಪಿಸಿದರು.

ಸರಕಾರವು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಟೀಕಿಸಿದ ಅವರು, ವಿದ್ಯುತ್ ಅಭಾವ ಇದ್ದರೆ ಹೊರರಾಜ್ಯಗಳಿಂದ ಖರೀದಿ ಮಾಡಬೇಕೇ ಎಂಬುದರ ಕಡೆ ತಯಾರಿಯನ್ನು ರಾಜ್ಯ ಸರಕಾರ ಮಾಡಬೇಕಿದೆ. ವಿದ್ಯುತ್ ಅವ್ಯವಸ್ಥೆಯಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಬಾರದು. ರೈತರ ಸಂಕಷ್ಟ ಪರಿಹರಿಸಿ ಎಂದು ಆಗ್ರಹಿಸಿದರು.

ಇವತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಿದೆ. ಶಿಕ್ಷಣ ತಜ್ಞರು, ಅನೇಕ ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿ, ವಿವಿಗಳನ್ನು ಮುಚ್ಚುವ ಸರಕಾರದ ತೀರ್ಮಾನ ಅವೈಜ್ಞಾನಿಕ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿಯ ನಾವು ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದ್ದೇವೆ. ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago