Featured

ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ :  ಡಾ. ಪುಷ್ಪಾ ಅಮರನಾಥ್ – vishwanews24

ಕಾಪು :  ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ..

ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ :  ಡಾ. ಪುಷ್ಪಾ ಅಮರನಾಥ್

ಮುಂದಿನ ದಿನಗಳಲ್ಲಿ ಪ್ರತೀ ಗ್ರಾ. ಪಂ.ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಯ ಸಮ್ಮೇಳನ : ವಿನಯ್ ಕುಮಾರ್ ಸೊರಕೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷತೆ ಡಾ. ಪುಷ್ಪಾ ಅಮರನಾಥ್ ಹೇಳಿದರು

     ಅವರು ಇಂದು ಕಾಪುವಿನಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಹಾಗೂ ಪ್ರಥಮ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.

   ಪುರುಷ ಪ್ರಧಾನವಾದ ಸಮಾಜದಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ, ಪುರುಷರಷ್ಟೇ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಯೋಜನೆಗಳನ್ನು ರೂಪಿಸಿದ್ದು, ಇದು ಇನ್ನಷ್ಟು ಅರ್ಹ ಫಲಾನುಭವಿಗಳನ್ನು ತಲುಪಬೇಕು ಎಂದರು.   

   ಅಧಿಕಾರಿಗಳು ಜನಪರ ಕಾಳಜಿ ಹಾಗೂ ಇಚ್ಛಾಶಕ್ತಿ ಹೊಂದಿದಾಗ ಮಾತ್ರ ಸರಕಾರದ ಯೋಜನೆಗಳು ಫಲಾನುಭವಿಗಳನ್ನು ತಲುಪಲು ಸಾಧ್ಯವಾಗುತ್ತದೆ. ಪ್ರತೀ ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿ, ವರದಿಯನ್ನು ಜಿಲ್ಲಾ ಹಾಗು ರಾಜ್ಯ ಮಟ್ಟಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು

   ಜನಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ಇಲಾಖಾ ಅಧಿಕಾರಿಗಳೊಂದಿಗೆ ಸಮಿತಿಯ ಸದಸ್ಯರುಗಳು ಗ್ಯಾರಂಟಿ ಅದಾಲತ್ ಅನ್ನು ಹಮ್ಮಿಕೊಂಡು, ಯೋಜನೆಯಲ್ಲಿ ಏನಾದರೂ ಲೋಪದೋಷಗಳಿದ್ದಲ್ಲಿ ಸ್ಥಳದಲ್ಲಿಯೇ ಪರಿಹಾರ ಮಾಡಲು ಕ್ರಮಕೈಗೊಳ್ಳಬೇಕು ಎಂದರು.

    ಮುಖಂಡರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಫಲಾನುಭವಿಗಳಿಗೆ ತಮಗೆ ದೊರಕುವ ಸವಲತ್ತುಗಳ ಬಗ್ಗೆ ಅರಿವು ಹೊಂದಿರಬೇಕು. ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಯ ಸಮ್ಮೇಳನವನ್ನು ಆಯೋಜಿಸಿ, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪದೇ ಇರುವ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕ್ರಮವಹಿಸಲಾಗುವುದು ಎಂದರು

    ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ಜನಸಾಮಾನ್ಯರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದನ್ನು ಯಥಾವತ್ತಾಗಿ ಜಾರಿ ಮಾಡಿದಾಗ ಮಾತ್ರ ಯೋಜನೆಗಳು ಪರಿಣಾಮಕಾರಿಯಾಗಿ ಫಲಾನುಭವಿಗಳನ್ನು ತಲುಪುತ್ತವೆ. ಉತ್ತಮ ಕಾರ್ಯಕ್ರಮಗಳು ಜನರ ಜೀವನವನ್ನು ಕಟ್ಟಿಕೊಡುವ ಕೆಲಸವನ್ನು ಮಾಡುತ್ತವೆ ಎಂದರು

    ಕಾಪು ತಾಲೂಕು ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ನವೀನ್ಚಂದ್ರ ಎಸ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನ ಸೇವೆಯೇ ಜನಾರ್ಧನ ಸೇವೆ ಎಂಬ ನಂಬಿಕೆಯೊAದಿಗೆ ನಾನು ಕಾರ್ಯ ನಿರ್ವಹಿಸುತ್ತೇನೆ. ಗ್ಯಾರಂಟಿ ಯೋಜನೆಯ ಪ್ರತಿಶತಃ ನೂರರಷ್ಟು ಅನುಷ್ಠಾನಕ್ಕೆ ಅಧಿಕಾರಿಗಳು ಹಾಗೂ ಜನಸಾಮಾನ್ಯರು ಸ್ಪಂದಿಸಬೇಕು ಎಂದರು

ಇದೇ ಸಂದರ್ಭದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಆರಂಭ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ತಾಲೂಕು ಸಮಿತಿಯ ಸದಸ್ಯರುಗಳಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು ಹಾಗೂ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು.   

    ಕಾರ್ಯಕ್ರಮದಲ್ಲಿ ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ, ಸ್ಥಾಯಿ ಸಮಿತಿಯ ಅಧ್ಯಕ್ಷ ಅನಿಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನೆ, ಕಾಪು ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರುಗಳಾದ ಕೀರ್ತಿ ಕುಮಾರ್, ಎಸ್ ವಿಜಯ್, ರೀನ್ ವಿನುತಾ ಡಿಸೋಜಾ, ಸವಿತಾ ಕುಂದರ್, ರಶ್ಮಿತಾ, ರೋಶನ್ ಕುಮಾರ್, ಉದಂiÀi ಸಿ, ಲವ ಕರ್ಕೇರ, ಪ್ರಭಾಕರ ಆಚಾರ್ಯ, ಹಸನಬ್ಬ ಶೇಖ್, ಮಹೇಶ್ ಶೆಟ್ಟಿ, ರಾಜ್ ಮೂಲ್ಯ, ಸುಧೀರ್ ಕರ್ಕೇರ, ಹಸನ್ ಬಾವ ಹಾಗೂ ಪೂರ್ಣಿಮಾ ಜಿ.ಸಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.  

    ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿ ಸಿಲ್ವ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ನಿರೂಪಿಸಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago