ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…