ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ : ಡಿಕೆ ಶಿ ಖಡಕ್​ ವಾರ್ನಿಂಗ್ – Vishwanews24

Featured, ರಾಜ್ಯ ನ್ಯೂಸ್

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ : ಡಿಕೆ ಶಿ ಖಡಕ್​ ವಾರ್ನಿಂಗ್

ಬೆಂಗಳೂರು: ಕರ್ನಾಟಕದಲ್ಲಿ  ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಣೆ ಮಾಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಫಲಾನುಭವಿಗಳು ಅರ್ಜಿ ಸಲ್ಲಿಕೆಗೆ ಮುಗಿಬಿದ್ದಿದ್ದಾರೆ.

ಇದನ್ನೇ ಬಂಡವಾಳ ಮಾಡಿಕೊಂಡು ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿವೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಗಮನಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ ಎಂದು ಖಡಕ್​ ವಾರ್ನಿಂಗ್ ಹೊರಡಿಸಿದ್ದಾರೆ.

ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ-  ವಿದ್ಯಾರ್ಥಿನಿ ಸಂಶಯಾಸ್ಪದ ಸಾವು – vishwanews24

ಈ ಬಗ್ಗೆ ಇಂದು(ಜೂನ್ 23) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನ ಹಣ ನೀಡುವಂತಿಲ್ಲ. ಸೇವಾಸಿಂಧು ಸೇರಿ ಹಲವು ಕೇಂದ್ರಗಳಲ್ಲಿ ಹಣ ಪಡೆಯುವ ದೂರು ಬಂದಿದೆ. ಯಾರೂ ಕೂಡ ಸಾರ್ವಜನಿಕರಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್​ ಸೂಚನೆ ಕೊಟ್ಟರು.

ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ-  ವಿದ್ಯಾರ್ಥಿನಿ ಸಂಶಯಾಸ್ಪದ ಸಾವು – vishwanews24

Leave a Reply