ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಣೆ ಮಾಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಫಲಾನುಭವಿಗಳು ಅರ್ಜಿ ಸಲ್ಲಿಕೆಗೆ ಮುಗಿಬಿದ್ದಿದ್ದಾರೆ.
ಇದನ್ನೇ ಬಂಡವಾಳ ಮಾಡಿಕೊಂಡು ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿವೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಮನಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಹೊರಡಿಸಿದ್ದಾರೆ.
ಈ ಬಗ್ಗೆ ಇಂದು(ಜೂನ್ 23) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನ ಹಣ ನೀಡುವಂತಿಲ್ಲ. ಸೇವಾಸಿಂಧು ಸೇರಿ ಹಲವು ಕೇಂದ್ರಗಳಲ್ಲಿ ಹಣ ಪಡೆಯುವ ದೂರು ಬಂದಿದೆ. ಯಾರೂ ಕೂಡ ಸಾರ್ವಜನಿಕರಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್ ಸೂಚನೆ ಕೊಟ್ಟರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…